ದೇಶ

ತ್ರಿರಾಷ್ಟ್ರ ಪ್ರವಾಸದ ಬಳಿಕ ಭಾರತಕ್ಕೆ ಬಂದಿಳಿದ ಪ್ರಧಾನಿ ಮೋದಿ

ತ್ರಿರಾಷ್ಟ್ರ ಪ್ರವಾಸ ಕೈಗೊಗಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ನವದೆಹಲಿಗೆ ಬಂದಿಳಿದಿದ್ದು, ಮೋದಿಯವರನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು...

ತ್ರಿರಾಷ್ಟ್ರ ಪ್ರವಾಸದ ಬಳಿಕ ಭಾರತಕ್ಕೆ ಬಂದಿಳಿದ ಪ್ರಧಾನಿ ಮೋದಿ
ತ್ರಿರಾಷ್ಟ್ರ ಪ್ರವಾಸದ ಬಳಿಕ ಭಾರತಕ್ಕೆ ಬಂದಿಳಿದ ಪ್ರಧಾನಿ ಮೋದಿ
Published On :
ನವದೆಹಲಿ: ತ್ರಿರಾಷ್ಟ್ರ ಪ್ರವಾಸ ಕೈಗೊಗಂಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ನವದೆಹಲಿಗೆ ಬಂದಿಳಿದಿದ್ದು, ಮೋದಿಯವರನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಏ.17ರಿಂದ ಸ್ವೀಡನ್, ಇಂಗ್ಲೆಂಡ್ ಮತ್ತು ಜರ್ಮನಿ ರಾಷ್ಟ್ರಗಳ ಪ್ರವಾಸ ಕೈಗೊಂಡು ಇಂದು ರಾಜಧಾನಿ ದೆಹಲಿಗೆ ಬಂದಿಳಿದಿದ್ದಾರೆ. 
ಏ.16-,17ರಂದು ಇದೇ ಮೊದಲ ಬಾರಿಗೆ ಸ್ವೀಡನ್ ಪ್ರಧಾನಿ ಸ್ಟೀಫನ್ ಲೋಫೆಲ್ ಅವರ ಆಮಂತ್ರಣದ ಹಿನ್ನಲೆಯಲ್ಲಿ, ಸ್ವೀಡನ್'ಗೆ ಭೇಡಿ ನೀಡಿದ್ದ ಮೋದಿಯವರು, ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸಿ, ಸ್ವೀಡನ್'ನ ಆಯ್ದ ಬ್ಯುಸಿನೆಸ್ ಲೀಡರ್ಸ್'ನ್ನು ಉದ್ದೇಶಿಸಿ ಮಾತನಾಡಿದ್ದರು. 
ಏ.17 ರಿಂದ 20 ರಂದು ಇಂಗ್ಲೆಂಡಿಗೆ ಭೇಟಿ ನೀಡಿ, ಲಂಡನ್ ನಲ್ಲಿ ನಡೆದ ಕಾಮನ್ ವೆಲ್ತ್ ಸಭೆಯಲ್ಲಿ ಪಾಲ್ಗೊಂಡಿದ್ದರು. ನಂತರ ಬ್ರಿಟನ್ ನಲ್ಲಿ ಕಾಮನ್ ವೆಲ್ತ್ ರಾಷ್ಟ್ರಗಳ ಮುಖ್ಯಸ್ಥ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. 
ಬಳಿಕ ಜರ್ಮನಿಗೆ ಭೇಟಿ ನೀಡಿದ್ದ ಮೋದಿಯವರು, ಬರ್ಲಿನ್ ನಲ್ಲಿ ಚಾನ್ಸಲರ್ ಏಂಜೆಲಾ ಮಾರ್ಕೆಲ್ ಅವರು ಆಯೋಜಿಸಿದ್ದ ಭೋಜನಕೂಟದಲ್ಲಿ ಪಾಲ್ಗೊಂಡು, ಉಭಯ ರಾಷ್ಟ್ರಗಳ ಆರ್ಥಿಕ ಬೆಳವಣಿಗೆ ಕುರಿತು ಚರ್ಚೆ ನಡೆಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.