ದೇಶ

ಅಪ್ರಾಪ್ತರ ಮೇಲಿನ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

12 ವರ್ಷದವರೆಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಅಪರಾಧಿಗಳನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಸ್ಕೋ) ಕಾಯ್ದೆಯಡಿ ಬಂಧಿಸಿ ಮರಣದಂಡನೆ ಜಾರಿಗೊಳಿಸಲು....

ಅಪ್ರಾಪ್ತರ ಮೇಲಿನ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
(ಸಂಗ್ರಹ ಚಿತ್ರ)
Published On :
ನವದೆಹಲಿ: ಅಪ್ರಾಪ್ತರ ಮೇಲಿನ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ 

12 ವರ್ಷದವರೆಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಅಪರಾಧಿಗಳನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಸ್ಕೋ) ಕಾಯ್ದೆಯಡಿ ಬಂಧಿಸಿ ಮರಣದಂಡನೆ ಜಾರಿಗೊಳಿಸಲು ಅವಕಾಶ ನೀಡುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. 

ಉನ್ನಾವೊ, ಕಥುವಾ ಅತ್ಯಾಚಾರ ಪ್ರಕರಣಗಳಲ್ಲಿ ದೇಶಾದ್ಯಂತ ತೀವ್ರವಾದ ಪ್ರತಿಭಟನೆಗಳು ಎದುರಾದ ಬೆನ್ನಲ್ಲೆ ಬಹುನಿರೀಕ್ಷಿತ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.  ಅಧಿಕೃತ ಮೂಲಗಳ ಪ್ರಕಾರ ಪೋಸ್ಕೋ ಕಾಯ್ದೆಯಲ್ಲಿ ಬದಲಾವಣೆಯಾಗಲಿದ್ದು, ಮಕ್ಕಳ ಮೇಲೆ ಅತ್ಯಾಚಾರ ನಡೆಸುವ ಅಪರಾಧಿಗಳಿಗೆ ಮರಣದಂಡನೆ ವಿಧಿಸಲಾಗುತ್ತದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.