ವಿವಾದಾತ್ಮಕ ಹೇಳಿಕೆ ನೀಡಬೇಡಿ: ಬಿಜೆಪಿ ಶಾಸಕರು, ಸಂಸದರಿಗೆ ಮೋದಿ ಎಚ್ಚರಿಕೆ
ಬಿಜೆಪಿಯ ಕೆಲವು ಸಂಸದರು, ಸಚಿವರು, ಶಾಸಕರು ನೀಡುತ್ತಿರುವ ಹೇಳಿಕೆಗಳು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದ್ದು, ವಿವಾದಾತ್ಮಕ ಹೇಳಿಕೆ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಶಾಸಕರು

Published On :
ನವದೆಹಲಿ: ಬಿಜೆಪಿಯ ಕೆಲವು ಸಂಸದರು, ಸಚಿವರು, ಶಾಸಕರು ನೀಡುತ್ತಿರುವ ಹೇಳಿಕೆಗಳು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದ್ದು, ವಿವಾದಾತ್ಮಕ ಹೇಳಿಕೆ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಶಾಸಕರು, ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ.
ನರೇಂದ್ರ ಮೋದಿ ಆಪ್ ಮೂಲಕ ಪಕ್ಷದ ಸಂಸದರು, ಶಾಸಕರಿಗೆ ಪ್ರಧಾನಿ ಸಲಹೆ ನೀಡಿದ್ದು, ಮಾಧ್ಯಮಗಳ ಎದುರು ಹೇಳಿಕೆ ನೀಡುವುದಕ್ಕೂ ಮುನ್ನ ಸ್ಪಷ್ಟತೆ ಇರಲಿ ಎಂದು ಸೂಚನೆ ನೀಡಿದ್ದಾರೆ. " ನಾವು ತಪ್ಪು ಮಾಡಿ ಮಾಧ್ಯಮಗಳಿಗೆ ಚರ್ಚೆಯ ಸರಕನ್ನು ಒದಗಿಸುತ್ತೇವೆ, ಕ್ಯಾಮರಾಗಳನ್ನು ನೋಡುತ್ತಿದ್ದಂತೆಯೇ ನಾವು ದೊಡ್ಡ ಸಮಾಜ ವಿಜ್ಞಾನಿಗಳು ಅಥವಾ ತಜ್ಞರು ಎಂಬಂತೆ ಹೇಳಿಕೆ ನೀಡಲು ಪ್ರಾರಂಭಿಸುತ್ತೇವೆ. ಇದರಿಂದ ಆಗುವ ಪ್ರಮಾದವನ್ನು ಮಾಧ್ಯಮಗಳು ಬಳಸಿಕೊಳ್ಳುತ್ತವೆ, ಆದರೆ ಅದು ಮಾಧ್ಯಮಗಳ ತಪ್ಪೂ ಅಲ್ಲ, ಹೇಳಿಕೆ ನೀಡಬೇಕಾದರೆ ಸ್ಪಷ್ಟತೆ ಇರಲಿ ಎಂದು ಮೋದಿ ಪಕ್ಷದ ಶಾಸಕರು, ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ಪಕ್ಷದ ಚುನಾಯಿತ ಪ್ರತಿನಿಧಿಗಳು ಜನರೊಂದಿಗೆ ನೇರವಾಗಿ ಸಂಪರ್ಕದಲ್ಲಿರುವುದರಿಂದ ಪಕ್ಷಕ್ಕೆ ಒಳಿತಾಗಲಿದೆ ಎಂದೂ ಪಕ್ಷದ ಜನಪ್ರತಿನಿಧಿಗಳ ಬಗ್ಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


