ಪ್ರತಿಯೊಬ್ಬ ಅತ್ಯಾಚಾರಿಗಳನ್ನೂ ನೇಣಿಗೇರಿಸಬೇಕು - ನಿರ್ಭಯಾ ತಾಯಿ ಹೇಳಿಕೆ
ಪ್ರತಿಯೊಬ್ಬ ಅತ್ಯಾಚಾರಿಗಳನ್ನೂ ನೇಣಿಗೇರಿಸಬೇಕೆಂದು ನಿರ್ಭಯಾ ಅವರ ತಾಯಿ ಆಶಾ ದೇವಿ ಆಗ್ರಹಿಸಿದ್ದಾರೆ.

ನವದೆಹಲಿ : ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಯನ್ನು ಕೇಂದ್ರಸರ್ಕಾರ ಜಾರಿಗೊಳಿಸುತ್ತಿರುವುದಕ್ಕೆ 2012ರಲ್ಲಿ ದೆಹಲಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ನಿರ್ಭಯಾ ಅವರ ತಾಯಿ ಆಶಾ ದೇವಿ ಪ್ರಶಂಸೆ ವ್ಯಕ್ತಪಡಿಸಿದ್ದು, ಪ್ರತಿಯೊಬ್ಬ ಅತ್ಯಾಚಾರಿಗಳನ್ನೂ ನೇಣಿಗೇರಿಸಬೇಕೆಂದು ಆಗ್ರಹಿಸಿದ್ದಾರೆ.
12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲಿನ ಅತ್ಯಾಚಾರಿಗಳ ವಿರುದ್ಧ ಒಳ್ಳೆಯ ಕ್ರಮ. ಅತ್ಯಾಚಾರಕ್ಕಿಂತ ಮತ್ತೊಂದು ಅಮಾನುಷ ಅಪರಾಧ ಇಲ್ಲ ಎಂದಿದ್ದಾರೆ.
ದೇಶದಲ್ಲಿ ಹೆಚ್ಚುತ್ತಿರುವ ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲಿನ ಅತ್ಯಾಚಾರ ತಡೆಗಟ್ಟಲು ಪೋಕ್ಸೋ ಕಾಯ್ದೆ ತಿದ್ದುಪಡಿಗೆ ಕೇಂದ್ರ ಸಚಿವ ಸಂಪುಟ ನಿನ್ನೆ ಒಪ್ಪಿಗೆ ನೀಡಿತ್ತು. 12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸಿದವರಿಗೆ ಗಲ್ಲು ಶಿಕ್ಷೆ ವಿಧಿಸಲು ಈ ಕಾಯ್ದೆಯಲ್ಲಿ ಅವಕಾಶವಿದೆ.
ಇದನ್ನು ಸುಗ್ರೀವಾಜ್ಞೆ ಮೂಲಕ ಹೊರಡಿಸಿ, ಅದನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿತ್ತು.
ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಇದೀಗ ರಾಷ್ಟ್ರಪತಿ ಕೋವಿಂದ್ ಅವರು ಅಂಕಿತ ಹಾಕಿದ್ದು, ಶೀಘ್ರದಲ್ಲಿಯೇ ಕಾರ್ಯರೂಪಕ್ಕೆ ಬರಲಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


