ಬಿಹಾರ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ, 24 ಗಂಟೆಗಳಲ್ಲಿ 3ನೇ ಘಟನೆ
ಕೇಂದ್ರ ಸರ್ಕಾರ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೆ ತಂದರೂ ಕಾಮುಕರು...

Published On :
ಪಾಟ್ನಾ: ಕೇಂದ್ರ ಸರ್ಕಾರ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೆ ತಂದರೂ ಕಾಮುಕರು ಯಾವುದೇ ಭಯ ಇಲ್ಲದೆ ಬಾಲಕಿಯರ ಮೇಲೆ ಅತ್ಯಾಚಾರ ಎಸಗುತ್ತಿದ್ದಾರೆ.
ಇಂದು ಬಿಹಾರದ ಮುಜಾಫರ್ ಪುರ ಜಿಲ್ಲೆಯಲ್ಲಿ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ ನಡೆದ ಮೂರನೇ ಘಟನೆ ಇದಾಗಿದೆ.
ಮುಸಾಹರಿ ಗ್ರಾಮದ ಮೆಕ್ಕೆ ಜೋಳದ ಹೊಲದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಶನಿವಾರ ರಾತ್ರಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಮುಸಾಹರಿ ಪೊಲೀಸ್ ಠಾಣೆಯ ಅಧಿಕಾರಿ ಜ್ಯೋತಿ ಕುಮಾರಿ ಅವರು ತಿಳಿಸಿದ್ದಾರೆ.
ಬಾಲಕಿಯ ಮನೆಯಿಂದ 1 ಕಿ.ಮೀ.ದೂರದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ನಿನ್ನೆ ಭಾಗಲ್ಪುರ್ ಜಿಲ್ಲೆಯಲ್ಲಿ 14 ವರ್ಷದ ಬಾಲಕಿ ಮೇಲೆ ನೆರೆಮನೆಯ 17 ವರ್ಷದ ಯುವಕ ಅತ್ಯಾಚಾರ ಎಸಗಿದ್ದನು. ಶನಿವಾರ ಮಧ್ಯಾಹ್ನ ರೊಹ್ಟಕ್ ಜಿಲ್ಲೆಯಲ್ಲೂ ಇತರೆ ರೀತಿಯ ಘಟನೆ ನಡೆದಿದ್ದು, 10 ವರ್ಷದ ಬಾಲಕಿಯ ಮೇಲೆ 21 ವರ್ಷದ ಯುವಕ ಅತ್ಯಾಚಾರ ಎಸಗಿದ್ದನು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


