ದ್ವೇಷದ ದಳ್ಳುರಿಯಲ್ಲಿ ದೇಶ ಬೆಂದರೂ, ಮತ್ತೊಮ್ಮೆ ಪ್ರಧಾನಿಯಾಗುವುದರತ್ತ ಮೋದಿ ಚಿತ್ತ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ವಾಗ್ದಾಳಿ ನಡೆಸಿದ್ದು, ಇಡೀ ದೇಶವೇ...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ವಾಗ್ದಾಳಿ ನಡೆಸಿದ್ದು, ಇಡೀ ದೇಶವೇ ಸುಡುತ್ತಿದ್ದರೂ ಮೋದಿ ಮಾತ್ರ ಮತ್ತೆ ಎರಡನೇ ಬಾರಿಗೆ ದೇಶದ ಪ್ರಧಾನಿಯಾಗುವತ್ತ ಚಿತ್ತಹರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ದೆಹೆಲಿಯಲ್ಲಿ ಆರಂಭವಾಗಿರುವ ಕಾಂಗ್ರೆಸ್ ನ ಸಂವಿಧಾನ ರಕ್ಷಿಸಿ ಅಭಿಯಾನದಲ್ಲಿ ಪಾಲ್ಗೊಂಡು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಸಂಸತ್ ಕಲಾಪ ಸ್ಥಗಿತಕ್ಕೆ ಕಾರಣರಾಗಿದ್ದು ಮಾತ್ರವಲ್ಲದೇ ದೇಶದ ಸರ್ವೋಚ್ಛ ನ್ಯಾಯಾಲಯದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ತಮ್ಮ ಆರ್ ಎಸ್ ಎಸ್ ಸಿದ್ಧಾಂತಗಳನ್ನು ದೇಶದ ಪ್ರಜೆಗಳ ಮೇಲೆ ಹೇರುವ ಮೂಲಕ ದೇಶದ ಸಂವಿಧಾನವನ್ನು ಹಾಳುಗೆಡುತ್ತಿದ್ದಾರೆ ಎಂದು ಹೇಳಿದರು.
ಪ್ರಮುಖವಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮಿಶ್ರಾ ಅವರ ವಿರುದ್ಧ ಮಹಾಭಿಯೋಗ ನಿಲುವಳಿ ಸೂಚನೆಯನ್ನು ಹಿನ್ನಲೆಯಾಗಿಸಿಕೊಂಡು ಮಾತನಾಡಿದ ರಾಹುಲ್ ಗಾಂಧಿ, ಆರ್ ಎಸ್ ಎಸ್ ಸಿದ್ಧಾಂತಗಳನ್ನು ಹೊಂದಿರುವ ವ್ಯಕ್ತಿಗಳನ್ನು ದೇಶದ ಉನ್ನತ ಸಂಸ್ಛೆಗಳಿಗೆ ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಮೂಲಕ ಸಂವಿಧಾನದ ಮೂಲ ಸಿದ್ಧಾಂತಗಳನ್ನು ಹಾಳು ಗೆಡವುತ್ತಿದೆ. ಮೋದಿ ಸರ್ಕಾರದ ಆಡಳಿತದಲ್ಲಿ ದಲಿತರಿಗೆ, ಮಹಿಳೆಯರಿಗೆ ಮತ್ತು ಅಲ್ಪ ಸಂಖ್ಯಾತರಿಗೆ ಯಾವುದೇ ರಕ್ಷಣೆ ಇಲ್ಲ. ದೇಶದ ಭವಿಷ್ಯವಾಗಬೇಕಿರುವ ಪುಟ್ಟ ಕಂದಮ್ಮಗಳು ಅತ್ಯಾಚಾರಿಗಳಿಗೆ ಬಲಿಯಾಗುತ್ತಿದ್ದು, ದಲಿತರ ಮತ್ತು ಅಲ್ಪ ಸಂಖ್ಯಾತರ ಆಸಕ್ತಿಗಳು ದಹಿಸಲ್ಪಡುತ್ತಿವೆ ಎಂದು ಹೇಳಿದರು.
ಅಂತೆಯೇ ನೀರವ್ ಮೋದಿಯಂತಹ ಉದ್ಯಮಿಗಳು ಬ್ಯಾಂಕ್ ಗಳಿಂದ ಸಾಲ ಪಡೆದು ವಿದೇಶಕ್ಕೆ ಹಾರುತ್ತಿದ್ದಾರೆ. ಆದರೂ ಇಂತಹ ಉದ್ಯಮಿಗಳ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿCongressಕಾಂಗ್ರೆಸ್New DelhiRahul Gandhiರಾಹುಲ್ ಗಾಂಧಿSave the Constitution campaignಸಂವಿಧಾನ ರಕ್ಷಿಸಿ ಅಭಿಯಾನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


