'ಪರಿಕ್ಕರ್ ಈಸ್ ನೋ ಮೋರ್', ಫೇಸ್ ಬುಕ್ ಪೋಸ್ಟ್ ಹಾಕಿದ್ದ ಗೋವಾ ಮೂಲದ ಉದ್ಯಮಿ ಬಂಧನ!
ಅನಾರೋಗ್ಯಕ್ಕೀಡಾಗಿ ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಾ ಸಿಎಂ ಪರಿಕ್ಕರ್ ಅವರು ಸಾವನ್ನಪ್ಪಿದ್ದಾರೆ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಗೋವಾ ಮೂಲದ ಉದ್ಯಮಿಯನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.

Published On :
ಪಣಜಿ: ಅನಾರೋಗ್ಯಕ್ಕೀಡಾಗಿ ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೋವಾ ಸಿಎಂ ಪರಿಕ್ಕರ್ ಅವರು ಸಾವನ್ನಪ್ಪಿದ್ದಾರೆ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಮೂಲದ ಉದ್ಯಮಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಸ್ವತಃ ಆರ್'ಟಿಐ ಕಾರ್ಯಕರ್ತ ಹಾಗೂ ಉದ್ಯಮಿ ಕೆನ್ನೈತ್ ಸಿಲ್ವೈರ ಅವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದು, ಸಿಎಂ ಎಂ ಮನೋಹರ್ ಪರಿಕ್ಕರ್ ಅವರ ಆರೋಗ್ಯ ಸ್ಥಿತಿ ಕುರಿತಂತೆ ಆರ್ಟಿಐ ಬಳಿ ಮಾಹಿತಿ ಕೇಳಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಸಲ್ಲಿಸಿದ್ದ ಎರಡು ದಿನಗಳ ಬಳಿಕ ನನ್ನನ್ನು ಬಂಧನಕ್ಕೊಳಪಡಿಸಲಾಯಿತು ಎಂದು ಹೇಳಿಕೊಂಡಿದ್ದಾರೆ.
ಬಿಜೆಪಿ ಸರ್ಕಾರಕ್ಕೆ ನಾನೆಂದರೆ ಭಯ. ಹೀಗಾಗೀ ನನ್ನನ್ನು ಅಕ್ರಮವಾಗಿ ಬಂಧನಕ್ಕೊಳಪಡಿಸಲಾಗಿದೆ. ಮಾಹಿತಿ ಕೇಳಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನೇರವಾಗಿ ಮುಖ್ಯಮಂತ್ರಿಗಳ ಕಚೇರಿಗೆ ಕಳುಹಿಸಿದ್ದಾರೆ. ಬಳಿಕ ನನ್ನನ್ನು ಬಂಧನಕ್ಕೊಳಪಡಿಸಲಾಯಿತು. ನನ್ನ ದನಿಯನ್ನು ಹತ್ತಿಕ್ಕಲು ಬಿಜೆಪಿ ಯತ್ನಿಸುತ್ತಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ, ಆರ್'ಟಿಐ ಬಳಿ ಸಲ್ಲಿಸಿದ್ದ ಅರ್ಜಿಯ ಪ್ರತಿಯನ್ನು ಫೇಸ್ ಬುಕ್ ನಲ್ಲಿ ಹಾಕಿಕೊಂಡಿದ್ದಾರೆ.
ಪರಿಕ್ಕರ್ ಅವರ ಅನುಪಸ್ಥಿತಿಯಲ್ಲಿ ಸರ್ಕಾರದಲ್ಲಿ ನಡೆಯುತ್ತಿರುವ ಕಾರ್ಯವೈಖರಿ, ಮುಖ್ಯಮಂತ್ರಿಗಳ ಆರೋಗ್ಯಕ್ಕಾಗಿ ಸರ್ಕಾರ ವ್ಯಯಿಸುತ್ತಿರುವ ವೆಚ್ಚ ಹಾಗೂ ಪರಿಕ್ಕರ್ ಅವರು ಯಾವಾಗ ಹಿಂತಿರುಗಿ ಬರುತ್ತಾರೆ ಎಂಬೆಲ್ಲಾ ಮಾಹಿತಿಯನ್ನು ಕೆನ್ನೈತ್ ಸಿಲ್ವೈರ ಕೇಳಿರುವುದು ಅರ್ಜಿಯಲ್ಲಿ ಪ್ರತಿಯಲ್ಲಿ ಕಂಡು ಬಂದಿದೆ.
ಪರಿಕ್ಕರ್ ಅವರು ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಪ್ರಸ್ತುತ ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಸಿಲ್ವೈರ ಅವರು ಪರಿಕ್ಕರ್ ಅವರ ಆರೋಗ್ಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳಿ ಸುದ್ದಿಯನ್ನು ಹರಡಿಸಿದ್ದರು ಎಂದು ಹೇಳಲಾಗುತ್ತಿದೆ. 'ಜಸ್ಟ್ ಗಾಟ್ ನ್ಯೂಸ್ ದಟ್ ಪರಿಕ್ಕರ್ ಈಸ್ ನೋ ಮೋರ್' (ಈಗಷ್ಟೇ ಸುದ್ದಿ ತಿಳಿಯಿತು ಪರಿಕ್ಕರ್ ಕೊನೆಯುಸಿರೆಳೆದಿದ್ದಾರೆ) ಎಂದು ಪೋಸ್ಟ್ ಮಾಡಿದ್ದ. ಈ ಹಿನ್ನಲೆಯಲ್ಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದರು ಎಂದು ವರದಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


