ಮೋದಿ ಸರ್ಕಾರ ತುರ್ತು ಪರಿಸ್ಥಿತಿಗಿಂತ ಕೆಟ್ಟ ಸ್ಥಿತಿ ಸೃಷ್ಟಿಸಿದೆ: ಯಶವಂತ್ ಸಿನ್ಹಾ
ಎರಡು ದಿನಗಳ ಹಿಂದಷ್ಟೇ ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಕೇಂದ್ರ ಸರ್ಕಾರದ ವಿರುದ್ಧ....

Published On :
ನವದೆಹಲಿ: ಎರಡು ದಿನಗಳ ಹಿಂದಷ್ಟೇ ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿ ನಿರ್ಮಾಣ ಮಾಡಿದೆ ಎಂದು ಸೋಮವಾರ ಆರೋಪಿಸಿದ್ದಾರೆ.
ಕಳೆದ ಏಪ್ರಿಲ್ 21ರಂದು ಬಿಜೆಪಿಗೆ ರಾಜಿನಾಮೆ ನೀಡಿ ರಾಜಕೀಯ ನಿವೃತ್ತಿ ಘೋಷಿಸಿದ್ದ ಯಶವಂತ್ ಸಿನ್ಹಾ, ಮೋದಿ ಸರ್ಕಾರದ ಕ್ರಮಗಳಿಂದಾಗಿ ದೇಶದ ಜನತೆಗೆ ಅಭದ್ರತೆ ಕಾಡುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೆ ಮೋದಿ ಪ್ರಜಾಪ್ರಭುತ್ವ ದೇಗುಲವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇಂದು ತಮ್ಮ ನಿವಾಸದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಸಿನ್ಹಾ, ತಮ್ಮ ರಾಜಿನಾಮೆಗೂ ಮತ್ತು ಪುತ್ರ ಹಾಗೂ ಕೇಂದ್ರ ಸಚಿವ ಜಯಂತ್ ಸಿನ್ಹಾ ಅವರ ಜನ್ಮದಿನಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.
ನಾನು ರಾಜಿನಾಮೆ ನೀಡಿದ ದಿನವೇ ಪುತ್ರನ ಜನ್ಮದಿನವಿದ್ದದ್ದು ಕೇವಲ ಕಾಕತಾಳಿಯ ಅಷ್ಟೇ ಎಂದು ಸಿನ್ಹಾ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಕೆಲವೊಂದು ನಿರ್ಧಾರಗಳಿಂದಾಗಿ ದೇಶದ ಯಾವುದೇ ಸಮುದಾಯಕ್ಕೂ ಭದ್ರತೆ ಇಲ್ಲದಂತಾಗಿದೆ. ಇಂದಿರಾ ಗಾಂಧಿ ಅವರ ತುರ್ತುಪರಿಸ್ಥಿತಿಗಿಂತಲೂ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


