ದೇಶ

ಮರಣದಂಡನೆ ಶಿಕ್ಷೆ ಅತ್ಯಾಚಾರ ತಡೆಯುತ್ತದೆ ಎಂಬುದಕ್ಕೆ ವೈಜ್ಞಾನಿಕ ಆಧಾರ ಇದೆಯೇ?: ಕೇಂದ್ರಕ್ಕೆ ಹೈಕೋರ್ಟ್ ಪ್ರಶ್ನೆ

ಮರಣದಂಡನೆ ಶಿಕ್ಷೆ ಅತ್ಯಾಚಾರಗಳನ್ನು ತಡೆಯುತ್ತದೆ ಎಂಬುದಕ್ಕೆ ವೈಜ್ಞಾನಿಕ ಅಂದಾಜು ಇದೆಯೇ ಎಂದು ಕೇಂದ್ರ ಸರ್ಕಾರವನ್ನು...

ಮರಣದಂಡನೆ ಶಿಕ್ಷೆ ಅತ್ಯಾಚಾರ ತಡೆಯುತ್ತದೆ ಎಂಬುದಕ್ಕೆ ವೈಜ್ಞಾನಿಕ ಆಧಾರ ಇದೆಯೇ?: ಕೇಂದ್ರಕ್ಕೆ ಹೈಕೋರ್ಟ್ ಪ್ರಶ್ನೆ
ದೆಹಲಿ ಹೈಕೋರ್ಟ್
Published On :
ದೆಹಲಿ: ಮರಣದಂಡನೆ ಶಿಕ್ಷೆ ಅತ್ಯಾಚಾರಗಳನ್ನು ತಡೆಯುತ್ತದೆ ಎಂಬುದಕ್ಕೆ ವೈಜ್ಞಾನಿಕ ಆಧಾರ ಇದೆಯೇ ಎಂದು ಕೇಂದ್ರ ಸರ್ಕಾರವನ್ನು ಹೈಕೋರ್ಟ್ ಪ್ರಶ್ನಿಸಿದೆ. 
ಅಪ್ರಾಪ್ತರ ಮೇಲೆ ಅತ್ಯಾಚಾರ ನಡೆಸುವ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿರುವ ಬೆನ್ನಲ್ಲೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಈ ಪ್ರಶ್ನೆ ಕೇಳಿದೆ. ಅತ್ಯಾಚಾರ ಅಪರಾಧಿಗಳಿಗೆ ಕನಿಷ್ಠ 7 ವರ್ಷಗಳ ಜೈಲು ಶಿಕ್ಷೆ ವಿಧಿಸುವುದಕ್ಕೆ ಸಂಬಂಧಿಸಿದಂತೆ ಪಿಐಎಲ್ ವಿಚಾರಣೆ ನಡೆಸುತ್ತಿದ್ದ ಕೋರ್ಟ್ " ಮರಣ ದಂಡನೆ ವಿಧಿಸುವುದರಿಂದ ಅತ್ಯಾಚಾರಗಳನ್ನು ತಡೆಗಟ್ಟಬಹುದೆಂಬ ಬಗ್ಗೆ ಅಧ್ಯಯನ ನಡೆಸಲಾಗಿದೆಯೇ? ಯಾವುದಾದರೂ  ವೈಜ್ಞಾನಿಕ ಅಂದಾಜು ಇದೆಯೇ ಎಂದು ಪ್ರಶ್ನಿಸಿದೆ. 
ಅಷ್ಟೇ ಅಲ್ಲದೇ ಈ ಕಾನೂನಿನಿಂದ ಸಂತ್ರಸ್ತೆಯ ಪರಿಸ್ಥಿತಿ ಏನಾಗುತ್ತದೆ ಎಂಬ ಬಗ್ಗೆ ಯೋಚಿಸಿದ್ದೀರಾ? ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದರೆ ಅತ್ಯಾಚಾರವೆಸಗಿದವನು ಸಂತ್ರಸೆತಯನ್ನು ಜೀವ ಸಹಿತ ಉಳಿಸುವನೇ? ಕೊಲೆಗೂ ಅತ್ಯಾಚಾರಕ್ಕೂ ಈಗ ಒಂದೇ ರೀತಿಯ ಶಿಕ್ಷೆಯಾಗಿದೆ ಎಂದು ದೆಹಲಿ ಹೈಕೋರ್ಟ್ ನ ಹಂಗಾಮಿ ನ್ಯಾ. ಗೀತಾ ಮಿತ್ತಲ್ ಹಾಗೂ ನ್ಯಾ. ಸಿ ಹರಿ ಶಂಕರ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. 
ಅತ್ಯಾಚಾರಿಗಳಿಗೆ ಎಂತಹ ಶಿಕ್ಷೆ ನೀಡಬೇಕೆಂಬ ಬಗ್ಗೆ ಸುಗ್ರೀವಾಜ್ಞೆ ಹೊರಡಿಸುವುದಕ್ಕೂ ಮುನ್ನ ಸಂತ್ರಸ್ತರ ಅಭಿಪ್ರಾಯ ಪಡೆಯಲಾಗಿದೆಯೇ ಎಂದೂ ಕೋರ್ಟ್ ಕೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.