ದೇಶ

ಕಾಶ್ಮೀರ: ಪುಲ್ವಾಮ ಎನ್ ಕೌಂಟರ್ ಗೆ ಮೂವರು ಜೆಇಎಂ ಉಗ್ರರು ಬಲಿ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಮಂಗಳವಾರ ನಡೆದ ಎನ್ ಕೌಂಟರ್ ನಲ್ಲಿ...

ಕಾಶ್ಮೀರ: ಪುಲ್ವಾಮ ಎನ್ ಕೌಂಟರ್ ಗೆ ಮೂವರು ಜೆಇಎಂ ಉಗ್ರರು ಬಲಿ
ಸಾಂದರ್ಭಿಕ ಚಿತ್ರ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಮಂಗಳವಾರ ನಡೆದ ಎನ್ ಕೌಂಟರ್ ನಲ್ಲಿ ಮೂವರು ಜೈಶ್ ಇ ಮೊಮ್ಮದ್(ಜೆಇಎಂ) ಉಗ್ರರನ್ನು ಹತ್ಯೆ ಮಾಡಲಾಗಿದೆ. ಇದೇ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಸಹ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಪಡೆದ ಪೊಲೀಸರು ಮತ್ತು ಸೇನಾಪಡೆ ಸಿಬ್ಬಂದಿ, ಪುಲ್ವಾಮ ಜಿಲ್ಲೆಯ ತ್ರಾಲ್ ಪ್ರದೇಶದ ಲಾಮ್ ಅರಣ್ಯದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದರು.
ಭದ್ರತಾ ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪ್ರತಿದಾಳಿ ನಡೆಸಿದ ಭದ್ರತಾ ಸಿಬ್ಬಂದಿ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. 
ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಯೋಧ ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರು. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹುತಾತ್ಮರಾದ ಯೋಧ ಅಜಯ್ ಕುಮಾರ್ ಮತ್ತು ಪೊಲೀಸ್ ಪೇದೆ ಲತೀಫ್ ಗುಜ್ರಿ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.