'ಭಾರತದ ಮೊದಲ ಪ್ರಧಾನಿ ನೆಹರೂ ಬದಲಿಗೆ ಮೋದಿ ಚಿತ್ರ'; ಗೂಗಲ್ ವಿರುದ್ದ ರಮ್ಯಾ ಆಕ್ರೋಶ
'ಭಾರತದ ಮೊದಲ ಪ್ರಧಾನಿ ನೆಹರೂ ಬದಲಿಗೆ, ಪ್ರಧಾನಿ ಮೋದಿ ಚಿತ್ರ ತೋರಿಸಿದ ಖ್ಯಾತ ಸರ್ಚ್ ಎಂಜಿನ್ ಗೂಗಲ್ ವಿರುದ್ಧ ಕಾಂಗ್ರೆಸ್ ಪಕ್ಷ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರಾದ ರಮ್ಯಾ ತೀವ್ರ ಕಿಡಿಕಾರಿದ್ದಾರೆ.

Published On :
ನವದೆಹಲಿ: 'ಭಾರತದ ಮೊದಲ ಪ್ರಧಾನಿ ನೆಹರೂ ಬದಲಿಗೆ, ಪ್ರಧಾನಿ ಮೋದಿ ಚಿತ್ರ ತೋರಿಸಿದ ಖ್ಯಾತ ಸರ್ಚ್ ಎಂಜಿನ್ ಗೂಗಲ್ ವಿರುದ್ಧ ಕಾಂಗ್ರೆಸ್ ಪಕ್ಷ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರಾದ ರಮ್ಯಾ ತೀವ್ರ ಕಿಡಿಕಾರಿದ್ದಾರೆ.
ಕಾಂಗ್ರೆಸ್‍ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ಈಗ ಗೂಗಲ್ ವಿರುದ್ಧ ಹರಿಹಾಯ್ದಿದ್ದು, ರಮ್ಯಾ ಗೂಗಲ್ ಸರ್ಚ್ ಇಂಜಿನ್‍ನಲ್ಲಿ`India first pm’ (ಭಾರತದ ಮೊದಲ ಪ್ರಧಾನಿ) ಎಂದು ಟೈಪ್ ಮಾಡಿ ಹುಡುಕಿದ್ದಾರೆ. ಆಗ ಅವರಿಗೆ ಜವಾಹರಲಾಲ್ ನೆಹರೂ ಹೆಸರು ಬಂದಿದೆ. ಆದರೆ ಅದರಲ್ಲಿ ಫೋಟೋ ಮಾತ್ರ ಬದಲಾಗಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಕಾಣಿಸಿಕೊಂಡಿದೆ.
ಗೂಗಲ್ ಅವಾಂತರದ ಸ್ಕ್ರೀನ್ ಶಾಟ್ ತೆಗೆದುಕೊಂಡ ರಮ್ಯಾ ಕೂಡಲೇ ಅದನ್ನು ಗೂಗಲ್ ಮತ್ತು ಗೂಗಲ್ ಇಂಡಿಯಾ ಸಂಸ್ಥೆಗಳಿಗೆ ತಿಳಿಸಿದ್ದಾರೆ. ಅಲ್ಲದೆ ಗೂಗಲ್ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದು, “ನಿಮ್ಮ ಕ್ರಮಾವಳಿಯಿಂದಾಗಿ ಹೀಗಾಗಿದೆ? ನಿಮ್ಮ ಸಂಗ್ರಹದಲ್ಲಿ ಬರೀ ಕಸಕಡ್ಡಿ ತುಂಬಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೀಗ ರಮ್ಯಾ ಅವರ ಈ ಟ್ವೀಟ್ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಟ್ವೀಟಿಗರು ಪರ-ವಿರೋಧ ಚರ್ಚೆ ಮಾಡುತ್ತಿದ್ದಾರೆ.
ನಿನ್ನೆಯಷ್ಟೇ ರಮ್ಯಾ ದೇಶದ ಪ್ರಧಾನಿ ಬಗ್ಗೆ ಟ್ವೀಟ್ ಮಾಡುವ ಮೂಲಕ ಮತ್ತೆ ಮೋದಿ ಕಾಲೆಳೆದಿದ್ದರು. ಕಾಂಗ್ರೆಸ್ ಟ್ವಿಟ್ಟರ್ ಖಾತೆಯಲ್ಲಿ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಅವರಿಗೆ ರಾಹುಲ್ ಜೊತೆ 15 ನಿಮಿಷದ ಚರ್ಚೆಯಲ್ಲಿ ಪಾಲ್ಗೊಳಲು ಧೈರ್ಯವಿದೆಯಾ ಅನ್ನೋ ಪ್ರಶ್ನೋತ್ತರವನ್ನು ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಮ್ಯಾ, ಪ್ರಧಾನಿ ಮೋದಿ ಅವರು ಹೇಳುವಂತೆ 56 ಇಂಚು ಎದೆ ಇಲ್ಲದೇ ಹೋದರೂ ಸಂಸತ್ತಿನಲ್ಲಿ 15 ನಿಮಿಷ ರಾಹುಲ್ ಗಾಂಧಿಯವರನ್ನು ಎದುರಿಸುವ ಸವಾಲು ಸ್ವೀಕರಿಸುವರೆಂದು ನಂಬಿದ್ದೇನೆ ಅಂತ ಹೇಳುವ ಮೂಲಕ ಲೇವಡಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


