ದೇಶ

ಜೆಇಎಂ ಉಗ್ರ ಸಂಘಟನೆಯ ಕಮಾಂಡರ್ ಸೇರಿ 4 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್ ಇ ಮೊಹಮ್ಮದ್(ಜೆಇಎಂ) ಸ್ವಯಂ ಘೋಷಿತ ಕಾರ್ಯಾಚರಣೆ ಕಮಾಂಡರ್ ಸೇರಿದಂತೆ ನಾಲ್ವರು ಉಗ್ರರನ್ನು ಭಾರತೀಯ ಸೇನೆಯ ಯೋಧರ ಹೊಡೆದುರುಳಿಸಿದ್ದಾರೆ...

ಜೆಇಎಂ ಉಗ್ರ ಸಂಘಟನೆಯ ಕಮಾಂಡರ್ ಸೇರಿ 4 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಭಾರತೀಯ ಸೇನೆ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್ ಇ ಮೊಹಮ್ಮದ್(ಜೆಇಎಂ) ಸ್ವಯಂ ಘೋಷಿತ ಕಾರ್ಯಾಚರಣೆ ಕಮಾಂಡರ್ ಸೇರಿದಂತೆ ನಾಲ್ವರು ಉಗ್ರರನ್ನು ಭಾರತೀಯ ಸೇನೆಯ ಯೋಧರ ಹೊಡೆದುರುಳಿಸಿದ್ದಾರೆ. 
ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರು ಭಾರತೀಯ ಯೋಧರ ಗುಂಡೇಟಿಗೆ ಬಲಿಯಾಗಿದ್ದಾರೆ ಎಂದು ಡಿಜಿಪಿ ಡಾ.ಎಸ್ ಪಿ ವೈದ್ ಸ್ಪಷ್ಟಪಡಿಸಿದ್ದಾರೆ. 
ಜೆಇಎಂ ಉಗ್ರ ಸಂಘಟನೆಯ ಕಮಾಂಡರ್ ಮುಫ್ತಿ ಯಾಸೀರ್ ಎನ್ ಕೌಂಟರ್ ನಲ್ಲಿ ಬಲಯಾಗಿರುವುದಾಗಿ ವೈದ್ ಅವರು ಟ್ವೀಟರ್ ಮೂಲಕ ತಿಳಿಸಿದ್ದಾರೆ. 
ರಾಷ್ಟ್ರೀಯ ರೈಫಲ್(ಆರ್ ಆರ್) ವಿಶೇಷ ಕಾರ್ಯಾಚರಣೆ ಪಡೆ(ಎಸ್ಒಜಿ), ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಕೈಗೊಂಡಿದ್ದರು. 
ಈ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಮತ್ತು ವಿಶೇಷ ಪೊಲೀಸ್ ಪಡೆಯ ಯೋಧರಿಬ್ಬರು ಹುತಾತ್ಮರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.