ದೇಶ

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆಗಿನ ಮಾತುಕತೆ ಫಲಪ್ರದ: ಪ್ರಧಾನಿ ಮೋದಿ

ಚೀನಾ ಅದ್ಯಕ್ಷ ಕ್ಸಿ ಜಿನ್ ಪಿಂಗ್ಅವರೊಂದಿಗೆ ನಡೆಸಿದ ಮಾತುಕತೆ ವ್ಯಾಪಕ ಮತ್ತು ಫಲಪ್ರದವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ...

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆಗಿನ ಮಾತುಕತೆ ಫಲಪ್ರದ: ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Published On :
ವೂಹಾನ್: ಚೀನಾ ಅದ್ಯಕ್ಷ ಕ್ಸಿ ಜಿನ್ ಪಿಂಗ್ಅವರೊಂದಿಗೆ ನಡೆಸಿದ ಮಾತುಕತೆ ವ್ಯಾಪಕ ಮತ್ತು ಫಲಪ್ರದವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ. 
ಚೀನಾ ಭೇಟಿ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ವೂಹಾನ್ ನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರನ್ನು ಭೇಟಿ ಮಾಡಿದ್ದು, ಅತ್ಯಂತ ಸಂತಸವನ್ನು ತಂದಿದೆ. ಮಾತುರಕತೆ ವೇಳೆ ಭಾರತ ಮತ್ತು ಚೀನಾ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಇತರೆ ಜಾಗತಿಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆಂದು ಹೇಳಿದ್ದಾರೆ. 
ಬಳಿಕ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು ಅತ್ಯುತ್ತಮವಾಗಿ ಸ್ವಾಗತಿಸಿದ್ದಕ್ಕೆ ಮೋದಿಯವರು ಇದೇ ವೇಳೆ ಧನ್ಯವಾದಗಳನ್ನು ಹೇಳಿದ್ದಾರೆ. 
ಹ್ಯೂಬೀ ಪ್ರಾಂತೀಯ ಮ್ಯೂಸಿಯಂ ಭೇಟಿ ವೇಳೆ ನನ್ನ ಜೊತೆಗಿದ್ದದ್ದು, ಬಹಳ ಸಂತಸವನ್ನು ತಂದಿದೆ. ಮ್ಯೂಸಿಯಂ ಚೀನಾದ ಇತಿಹಾಸ ಮತ್ತು ಸಂಸ್ಕೃತಿಯ ಮಹತ್ವದ ಅಂಶಗಳಿರುವ ನೆಲೆಯಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.