ಛತ್ತೀಸ್ ಗಡ: ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಮಹಿಳಾ ನಕ್ಸಲ್ ಹತ್ಯೆ
ಛತ್ತೀಸ್ ಗಡದ ಸುಕ್ಮಾ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಕ್ಸಲೀಯರು ಹಾಗೂ ಭದ್ರತಾ ಪಡೆಗಳು ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ಗುಂಪಿನಲ್ಲಿದ್ದ ಮಹಿಳೆಯೊಬ್ಬರ ಹತ್ಯೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುರ್ಕಾಪಾಲ್: ಛತ್ತೀಸ್ ಗಡದ ಸುಕ್ಮಾ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ನಕ್ಸಲೀಯರು ಹಾಗೂ ಭದ್ರತಾ ಪಡೆಗಳು ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ಗುಂಪಿನಲ್ಲಿದ್ದ ಮಹಿಳೆಯೊಬ್ಬರ ಹತ್ಯೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಕ್ಮಾ ಜಿಲ್ಲೆಯ ಬುರ್ಕಾಪಾಲ್ ಅರಣ್ಯ ಪ್ರದೇಶದಲ್ಲಿ ಇಂದು ನಕ್ಸಲೀಯರು ಪ್ರತ್ಯಕ್ಷರಾಗಿದ್ದು, ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಆರು ಮಂದಿ ನಕ್ಸಲೀಯರ ಗುಂಪಿನಲ್ಲಿ ಒಬ್ಬರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ರಾಜಧಾನಿ ರಾಯಪುರದಿಂದ 400 ಕಿಲೋ ಮೀಟರ್ ದೂರದಲ್ಲಿ ಈ ಅರಣ್ಯ ಪ್ರದೇಶವಿದ್ದು, ಜಿಲ್ಲಾ ಮೀಸಲು ಗಾರ್ಡ್, ವಿಶೇಷ ಕಾರ್ಯ ಪಡೆ ಹಾಗೂ ಸಿಆರ್ ಪಿಎಫ್ ತಂಡಗಳು ಪ್ರತ್ಯೇಕವಾಗಿ ಕೆಲ ದಿನಗಳಿಂದಲೂ ಕೊಬಿಂಗ್ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಬೆಳಿಗ್ಗೆ ವಿಶೇಷ ಕಾರ್ಯಪಡೆ ಹಾಗೂ ಡಿಆರ್ ಜಿ ಸಿಬ್ಬಂದಿ ಬುರ್ಕಾಪಾಲ್ ನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ನಕ್ಸಲ್ ಗುಂಪಿನ ಮಹಿಳೆಯೊಬ್ಬರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದೆ ಎಂದು ಅವರು ಹೇಳಿದ್ದಾರೆ.
ನಕ್ಸಲ್ ಮಹಿಳೆಯ ಮೃತದೇಹವನ್ನು ವಶಕ್ಕೆ ಪಡೆಯಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ. ಗುಂಡಿನ ದಾಳಿ ಕಾರ್ಯಾಚರಣೆಯನ್ನು ಆಗ್ಗಾಗೇ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


