ಕಾಂಗ್ರೆಸ್ ಇಲ್ಲದೆ ರೈತರು ಬದುಕುಳಿಯುವುದಿಲ್ಲ; ಜನಾಕ್ರೋಶ ರ್ಯಾಲಿಯಲ್ಲಿ ರಾಹುಲ್ ಗಾಂಧಿ
ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಜನಾಕ್ರೋಶ ರ್ಯಾಲಿಯಲ್ಲಿ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು...

Published On :
ನವದೆಹಲಿ; ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಜನಾಕ್ರೋಶ ರ್ಯಾಲಿಯಲ್ಲಿ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ಮೋದಿಯವರು ಜನರಿಗೆ ಸುಳ್ಳು ಹಾಗೂ ಟೊಳ್ಳು ಭರವಸೆಗಳನ್ನು ನೀಡಿ ಮೋಸ ಮಾಡಿದ್ದಾರೆಂದು ಭಾನುವಾರ ಹೇಳಿದ್ದಾರೆ.
ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪಕ್ಷದ 2 ಲಕ್ಷ ಕಾರ್ಯಕರ್ತರನ್ನುದ್ದೇಶಿ ಮಾತನಾಡಿರುವ ಅವರು, ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಪ್ರಧಾನಿ ಮೋದಿಯವರು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಮೋದಿಯವರು ವಿಫಲರಾಗಿದ್ದಾರೆ. 2 ಕೋಟಿ ಉದ್ಯೋಗ ಸೃಷ್ಟಿಯ ಕಥೆ ಏನಾಯಿತು? ಕಪ್ಪು ಹಣವನ್ನು ಭಾರತಕ್ಕೆ ತರುವ ಕಥೆ ಏನಾಯಿತು ಎಂದು ಪ್ರಶ್ನಿಸಿದ್ದಾರೆ.
ನ್ಯಾಯಮೂರ್ತಿ ಲೋಯಾ ಬಗ್ಗೆ ಸುಪ್ರೀಂಕೋರ್ಟ್ ನ್ಯಾಯಾಧೀಶರು ಮಾತನಾಡಲು ಆರಂಭಿಸಿದ್ದಾಗ ಮೋದಿಯವರೇಕೆ ಮೌನವಾಗಿದ್ದರು. ಆರ್ಥಿಕ ಅಪರಾಧಿಗಳಾದ ನೀರವ್ ಮೋದಿಯವರ ಬಗ್ಗೆ ಜನರು ಪ್ರಶ್ನ ಮಾಡಿದಾಗೇಕೆ ಮೌನವಾಗಿದ್ದರು? ನಮ್ಮ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ದಾಳಿಗಳು ನಡೆಯುತ್ತಿವೆ. ಸಂಸತ್ತು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸಲು ಬಿಡಲಿಲ್ಲ. ಇಂದು ನಮ್ಮ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಅದನ್ನು ಸಂರಕ್ಷಿಸಲು ನಾವು ಒಗ್ಗಟ್ಟಿನಿಂದ ಕೆಲಸ ಮಾಡಬೇಕು.
ದೇಶದ ರೈತರನ್ನು ಸಂರಕ್ಷಿಸುವಲ್ಲಿ ಬಿಜೆಪಿ ಸರ್ಕಾರ ವಿಫಲಗೊಂಡಿದೆ. ರೈತರ ಸಾಲ ಮನ್ನಾ ಮಾಡುವುದು ಬಿಜೆಪಿಯ ನೀತಿಯಲ್ಲ ಎಂದು ಈ ಹಿಂದೆಯೇ ಅರುಣ್ ಜೇಟ್ಲಿ ಹೇಳಿದ್ದಾರೆ. ಕಾಂಗ್ರೆಸ್ ಇಲ್ಲದೆಯೇ ದೇಶದ ರೈತರು ಬದುಕುಳಿಯುವುದು ಸಾಧ್ಯವೇ ಇಲ್ಲ ಎಂದಿದ್ದಾರೆ.
ಬಳಿಕ ಆರ್'ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್, ಆರ್'ಎಸ್ಎಸ್ ಸಂಸ್ಥೆಗೆ ನಿಷ್ಠಾವಂತರಂತಿರುವ ಜನರು ಪ್ರಮುಖ ಸಂಸ್ಥೆಗಳ ಉಸ್ತುವಾರಿ ವಹಿಸಿಕೊಂಡಿದ್ದಾರೆಂದಿದ್ದಾರೆ.
ಬಳಿಕ ಮಾತನಾಡಿರುವ ಸೋನಿಯಾ ಗಾಂಧಿಯವರು, ಅಧಿಕಾರಕ್ಕೆ ಬರುವಾಗ ಮೋದಿಯವರು 'ನಾ ಖಾವೂಂಗಾ ನಾ ಖಾನೆ ದೂಂಗಾ' (ನಾನು ತಿನ್ನುವುದಿಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ) ಎಂದು ಹೇಳುತ್ತಿದ್ದರು. ಆದರೆ, ದೇಶದಲ್ಲಿಂದು ಭ್ರಷ್ಟಾಚಾರ ಹೆಚ್ಚಾಗಿದೆ. ಇಂದು ದೇಶದಲ್ಲಿ ಅಸತ್ಯ ಹಾಗೂ ಅನ್ಯಾಯ ತಾಂಡವವಾಡುತ್ತಿದೆ. ಇವುಗಳ ವಿರುದ್ಧ ದನಿಯೆತ್ತುವವರು ಮೋದಿ ಸರ್ಕಾರ ಕೋಪಕ್ಕೆ ಗುರಿಯಾಗಬೇಕಿದೆ ಎಂದು ತಿಳಿಸಿದ್ದಾರೆ.
ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಮಾತನಾಡಿ, ಆಡಳಿತಾರೂಢ ಎನ್ ಡಿಎ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಒಗ್ಗೂಡಿ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿತ್ತು. ಆದರೆ, ಸರ್ಕಾರ ಅದಕ್ಕೆ ಅವಕಾಶ ಮಾಡಿಕೊಡದೆ ಹತ್ತಿಕ್ಕುವ ಪ್ರಯತ್ನ ಮಾಡಿತು. ಸಂವಿಧಾನಕ್ಕೆ ಪ್ರಜಾಪ್ರಭುತ್ವ ಉಡುಗೊರೆಯಾಗಿದೆ. ಅದನ್ನು ಸಂರಕ್ಷಿಸಲು ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ModiದೆಹಲಿDelhifarmersRahul Gandhiರಾಹುಲ್ ಗಾಂಧಿರೈತರುಮೋದಿJan Akrosh rallyಜನಾಕ್ರೋಶ ರ್ಯಾಲಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


