ಕರ್ನಾಟಕ ಚುನಾವಣೆ ನಂತರ ಕೈಲಾಸ ಮಾನಸ ಸರೋವರ ಯಾತ್ರೆ: ರಾಹುಲ್ ಗಾಂಧಿ
ಕರ್ನಾಟಕ ವಿಧಾನ ಸಭೆ ಚುನಾವಣೆ ನಂತರ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ....

Published On :
ನವದೆಹಲಿ: ಕರ್ನಾಟಕ ವಿಧಾನ ಸಭೆ ಚುನಾವಣೆ ನಂತರ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಜನಾಕ್ರೋಶ ರ‍್ಯಾಲಿ'ಯಲ್ಲಿ ಮಾತನಾಡಿದ ಅವರು, 'ಎರಡು ಮೂರು ದಿನಗಳ ಹಿಂದಷ್ಟೇ ನಾವು ಕರ್ನಾಟಕದಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದೆವು. 8000 ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನ ಇದ್ದಕ್ಕಿದ್ದಂತೆ ತಾಂತ್ರಿಕ ದೋಷದಿಂದ ವಿಮಾನ ನೆಲದತ್ತ ಧಾವಿಸತೊಡಗಿತು. 'ಕಥೆ ಮುಗೀತು' ಎಂದೇ ನಾನು ಭಾವಿಸಿದೆ. ಅದೃಷ್ಟವಶಾತ್ ಏನೂ ಅಪಾಯ ಸಂಭವಿಸಿಲ್ಲ. ಆ ಕ್ಷಣವೇ ನನ್ನ ಮನಸ್ಸಲ್ಲಿ ಕೈಲಾಸ ಮಾನ ಸರೋವರ ಯಾತ್ರೆ ಮಾಡಬೇಕೆಂಬ ಯೋಚನೆ ಬಂತು. ಇದು ನನ್ನ ಹೃದಯದಿಂದ ಮೂಡಿದ ಬಯಕೆ. ಅದನ್ನೇ ನಿಮ್ಮೆದುರು ಹೇಳಿಕೊಳ್ಳುತ್ತಿದ್ದೇನೆ' ಎಂದು ತಿಳಿಸಿದರು.
ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಹೇಳಿಕೊಂಡಿರುವ ರಾಹುಲ್, ಚುನಾವಣೆ ಪ್ರಕ್ರಿಯೆಗಳು ಮುಗಿದ ಕೂಡಲೇ 15 ದಿನಗಳ ಕಾಲ ತೀರ್ಥಯಾತ್ರೆ ಕೈಗೊಳ್ಳುವುದಾಗಿ ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅನುಮತಿ ನೀಡಬೇಕೆಂದು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rahul Gandhiರಾಹುಲ್ ಗಾಂಧಿKailash Mansarovar Yatraಕೈಲಾಸ ಮಾನಸ ಸರೋವರ ಯಾತ್ರೆಕರ್ನಾಟಕ ಚುನಾವಣೆKarnataka elections
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


