ಕಾಶ್ಮೀರ: ಉಗ್ರ 'ಸಮೀರ್ ಟೈಗರ್' ಹತ್ಯೆಗೆ ಪ್ರತಿಯಾಗಿ 3 ನಾಗರಿಕರನ್ನು ಹತ್ಯೆಗೈದ ಭಯೋತ್ಪಾದಕರು
ಉಗ್ರ ಸಮೀರ್ ಅಹ್ಮದ್ ಭಟ್ ಅಲಿಯಾಸ್ ಸಮೀರ್ ಟೈಗರ್ ಹತ್ಯೆಗೆ ಪ್ರತಿಕಾರವಾಗಿ ಮೂವರು ನಾಗರೀಕರನ್ನು ಭಯೋತ್ಪಾದಕರು ಹತ್ಯೆಗೈದಿದ್ದಾರೆ...

Published On :
ಬಾರಾಮುಲ್ಲಾ(ಜಮ್ಮು ಮತ್ತು ಕಾಶ್ಮೀರ): ಉಗ್ರ ಸಮೀರ್ ಅಹ್ಮದ್ ಭಟ್ ಅಲಿಯಾಸ್ ಸಮೀರ್ ಟೈಗರ್ ಹತ್ಯೆಗೆ ಪ್ರತಿಕಾರವಾಗಿ ಮೂವರು ನಾಗರೀಕರನ್ನು ಭಯೋತ್ಪಾದಕರು ಹತ್ಯೆಗೈದಿದ್ದಾರೆ.
ಹಿಜ್ಬುಲ್ ಮುಜಾಯಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಸಮೀರ್ ಟೈಗರ್ ಸೇರಿದಂತೆ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು. ಇದಕ್ಕೆ ಪ್ರತಿಯಾಗಿ ಬಾರಾಮುಲ್ಲಾದಲ್ಲಿ ಉಗ್ರರು ಗುಂಡಿನ ಸುರಿಮಳೆಗೈದಿದ್ದಾರೆ. ಇದರಲ್ಲಿ ಮೂವರು ನಾಗರೀಕರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಪುಲ್ವಾಮಾದ ದ್ರಾಬ್ ಗಾಂವ್ ನ ಮನೆಯೊಂದರಲ್ಲಿ ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಭಾರತೀಯ ಯೋಧರು, ವಿಶೇಷ ಕಾರ್ಯಪಡೆ ಮತ್ತು ರಾಜ್ಯ ಪೊಲೀಸ್ ಹಾಗೂ ಸಿಆರ್ಪಿಎಫ್ ದಳದ ಸಿಬ್ಬಂದಿಗಳು ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹೊಡೆದುರುಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


