ದೇಶ

ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು; ಮದುವೆಯಾಗಬೇಕಿದ್ದ ವರ ಮಸಣ ಸೇರಿದ

ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ವರ ಮದುವೆ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಮಸಣ ಸೇರಿಸುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ...

ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು; ಮದುವೆಯಾಗಬೇಕಿದ್ದ ವರ ಮಸಣ ಸೇರಿದ
ಸಂಗ್ರಹ ಚಿತ್ರ
Published On :
ಶಹಜಾನಪುರ: ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ವರ ಮದುವೆ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಹಾರಿಸಿದ ಗುಂಡು ತಗುಲಿ ಮಸಣ ಸೇರಿಸುವ ಹೃದಯ ವಿದ್ರಾವಕ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. 
ಲಕ್ಮೀಪುರ ಖೇರಿ ಜಿಲ್ಲೆಯ ರಾಮ್ಪುರ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮದುವೆ ಸಂಬಂಧ ವರ ಪೂಜಾ ಕೈಂಕರ್ಯದಲ್ಲಿ ತೊಡಗಿದ್ದಾಗ ರಾಮಚಂದ್ರ ಎಂಬಾತ ಹಾರಿಸಿದ ಗುಂಡು ವರ ಸುನೀಲ್ ವರ್ಮಾನ ಎದೆಗೆ ತಗುಲಿದೆ. ಕೂಡಲೇ ಆತ ಅಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದಾನೆ. 
ಈ ಸಂಬಂಧ ಪೊಲೀಸರು ರಾಮಚಂದ್ರ ವಿರುದ್ಧ ಸೆಕ್ಷನ್ 302(ಕೊಲೆ)ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ರಾಮಚಂದ್ರ ಸುನೀಲ್ ವರ್ಮಾನ ಆಪ್ತ ಸ್ನೇಹಿತನಾಗಿದ್ದು ಸದ್ಯ ಪ್ರಕರಣ ನಂತರ ಆತ ತಲೆ ಮರೆಸಿಕೊಂಡಿದ್ದಾನೆ. 
ರಾಮಚಂದ್ರ ಹಾರಿಸಿದ ಗುಂಡು ಸುನೀಲ್ ವರ್ಮಾನ ಎದೆಗೆ ಬಿದ್ದು ಆತ ಮೃತಪಟ್ಟಿರುವ ಸಂಪೂರ್ಣ ದೃಶ್ಯಗಳು ಸೆರೆಯಾಗಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.