ಪಿಂಚಣಿ ಯೋಜನೆಗೆ ಆಧಾರ್ ಕಡ್ಡಾಯ ನಿಯಮ ರದ್ದುಗೊಳಿಸಿದ ದೆಹಲಿ ಸರ್ಕಾರ
ಅಂಗವಿಕಲರು, ವೃದ್ದರು ಹಾಗೂ ವಿಧವೆಯರು ಪಿಂಚಣಿ ಪಡೆಯಲು ಆಧಾರ್ ಕಡ್ಡಾಯ ಮತ್ತು ಬ್ಯಾಂಕ್ ಖಾತೆಗೆ ಆಧಾರ್...

Published On :
ನವದೆಹಲಿ: ಅಂಗವಿಕಲರು, ವೃದ್ದರು ಹಾಗೂ ವಿಧವೆಯರು ಪಿಂಚಣಿ ಪಡೆಯಲು ಆಧಾರ್ ಕಡ್ಡಾಯ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ ನಿಯಮವನ್ನು ರದ್ದುಗೊಳಿಸಬೇಕು ಎಂದು ದೆಹಲಿ ಸಮಾಜ ಕಲ್ಯಾಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ದೆಹಲಿ ಸಚಿವ ಸಂಪುಟ ಮಂಗಳವಾರ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಆಧಾರ್ ಇಲ್ಲದ್ದಕ್ಕಾಗಿ ತಡೆಹಿಡಿಯಲಾಗಿದ್ದ ಪಿಂಚಣಿಯನ್ನು ಸಮಾಜ ಕಲ್ಯಾಣ ಇಲಾಖೆ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.
ಇದೇ ವೇಳೆ ಪರಿಷ್ಕೃತ ಪಿಂಚಣಿಯನ್ನು ಏಪ್ರಿಲ್ 2018ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಲು ಸಂಪುಟ ಸಭೆ ನಿರ್ಧರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


