ದೇಶ

ಎಸ್ ಸಿ/ಎಸ್ ಟಿ ಕಾಯ್ದೆಯ ಮೂಲ ನಿಬಂಧನೆಗಳ ಜಾರಿಗೆ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡನೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಯ ಮೂಲ ನಿಬಂಧನೆಗಳನ್ನು ಪುನಃ ಜಾರಿಗೊಳಿಸಲು ಕೇಂದ್ರ ಸರ್ಕಾರ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಜಾರಿಗೊಳಿಸಲು ಸಿದ್ಧತೆ ನಡೆಸಿದೆ.

ಎಸ್ ಸಿ/ಎಸ್ ಟಿ ಕಾಯ್ದೆಯ ಮೂಲ ನಿಬಂಧನೆಗಳ ಜಾರಿಗೆ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ  ಮಂಡನೆ: ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಎಸ್ ಸಿ/ಎಸ್ ಟಿ ಕಾಯ್ದೆಯ ಮೂಲ ನಿಬಂಧನೆಗಳ ಜಾರಿಗೆ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಮಂಡನೆ
Published On :
ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಯ ಮೂಲ ನಿಬಂಧನೆಗಳನ್ನು ಪುನಃ ಜಾರಿಗೊಳಿಸಲು ಕೇಂದ್ರ ಸರ್ಕಾರ ಪ್ರಸಕ್ತ ಅಧಿವೇಶನದಲ್ಲಿ ಮಸೂದೆ ಜಾರಿಗೊಳಿಸಲು  ಸಿದ್ಧತೆ ನಡೆಸಿದೆ. 
ಡಿ ಕೇಸ್ ದಾಖಲಾದ ಕೂಡಲೇ ಅಧಿಕಾರಿಗಳನ್ನು ಬಂಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಇತ್ತೀಚಿಗೆ ಹೊರಡಿಸಿದ್ದ ಆದೇಶಕ್ಕೆ ದೇಶಾದ್ಯಂತ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಕಾಯ್ದೆಯ ಮೂಲ ನಿಬಂಧನೆಗಳನ್ನು ಮತ್ತೆ ಜಾರಿಗೊಳಿಸಬೇಕೆಂದು ಹಲವು ಸಂಘಟನೆಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕಾಯ್ದೆಯ ಮೂಲ ಅಂಶಗಳ ನಿಬಂಧನೆಗಳನ್ನು ಮತ್ತೆ ಜಾರಿಗೊಳಿಸಲು ಮುಂದಾಗಿದ್ದು, ಇದಕ್ಕಾಗಿ ಸಂಸತ್ ನಲ್ಲಿ ಮಸೂದೆ ಮಂಡಿಸಲು ಸಿದ್ಧತೆ ನಡೆಸಿದೆ. ಮಸೂದೆ ಪ್ರಸಕ್ತ ಅಧಿವೇಶನದಲ್ಲೇ ಮಂಡನೆಯಾಗಿ ಅನುಮೋದನೆ ಪಡೆಯುವ ಸಾಧ್ಯತೆ ಹೆಚ್ಚಿದೆ. ಎಸ್ ಸಿ/ಎಸ್ ಟಿ ಕಾಯ್ದೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 
ಕಾಯ್ದೆಯಲ್ಲಿನ ನಿಬಂಧನೆಗಳನ್ನು ಪುನರ್ ಸ್ಥಾಪಿಸಲು ಸುಗ್ರೀವಾಜ್ಞೆ ಘೋಷಿಸುವುದರಿಂದ  ಶಾಂತಿ ನೆಲೆಸಲು ನೆರವಾಗಬಹುದು ಎಂಬ ವಿವಿಧ ಮಟ್ಟದಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸರ್ಕಾರ, ಸುಗ್ರೀವಾಜ್ಞೆ ಸೇರಿದಂತೆ ಮತ್ತಿತರ ಆಯ್ಕೆಗಳನ್ನು ಸರ್ಕಾರ ಪರಿಗಣಿಸುತ್ತಿದೆ ಎಂದು ಹೇಳಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.