ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ಸೆ.28ರವರೆಗೂ ಚಿದಂಬರಂ ಬಂಧನಕ್ಕೆ ತಡೆ

ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರು ಸೆ.28ರವರೆಗೂ ಬಂಧನ ಭೀತಿಯಿಂದ ಪಾರಾಗಿದ್ದಾರೆ...

ಐಎನ್ಎಕ್ಸ್ ಮೀಡಿಯಾ ಹಗರಣ: ಸೆ.28ರವರೆಗೂ ಚಿದಂಬರಂ ಬಂಧನಕ್ಕೆ ತಡೆ
ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ
Published On :
ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಕೇಂದ್ರ ಮಾಜಿ ಸಚಿವ ಪಿ.ಚಿದಂಬರಂ ಅವರು ಸೆ.28ರವರೆಗೂ ಬಂಧನ ಭೀತಿಯಿಂದ ಪಾರಾಗಿದ್ದಾರೆ. 
ಚಿದಂಬರಂ ಅವರು 3,500 ಕೋಟಿ ಮೊತ್ತ ಏರ್ ಸೆಲ್-ಮ್ಯಾಕ್ಸಿಸ್ ಮತ್ತು 305 ಕೋಟಿ ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದು ದೆಹಲಿಯ ಪಟಿಯಾಲ ಕೋರ್ಟ್ ಇಂದು ವಿಚಾರಣೆ ನಡೆಸಿ ಸೆ.28ಗೂ ಬಂಧನಕ್ಕೆ ಮಧ್ಯಂತರ ತಡೆ ನೀಡಿದೆ. 
ಏರ್ ಸೆಲ್-ಮ್ಯಾಕ್ಸಿಸ್ ಸಂಬಂಧಿಸಿದಂತೆ 2011ರಲ್ಲಿ ಸಿಬಿಐ ಮತ್ತು 2012ರಲ್ಲಿ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಿತ್ತು. 
ಕೇಂದ್ರ ಮಾಜಿ ಸಚಿವ ಪಿ ಚಿದಂಬರಂ ಬಂಧನಕ್ಕೆ ನೀಡಲಾಗಿದ್ದ ಮಧ್ಯಂತರ ತಡೆ ಆದೇಶವನ್ನು ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 28ರವರೆಗೂ ವಿಸ್ತರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.