ಅತ್ಯಾಚಾರಕ್ಕೊಳಗಾದ ಮಕ್ಕಳ ಮಾರ್ಫ್ ಫೋಟೋವನ್ನೂ ಬಳಸುವಂತಿಲ್ಲ: ಸುಪ್ರೀಂ ಕೋರ್ಟ್
ಅತ್ಯಾಚಾರಕ್ಕೊಳಗಾದ ಮಕ್ಕಳ ಮಾರ್ಫ್ ಫೋಟೊವನ್ನೂ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ.

Published On :
ಅತ್ಯಾಚಾರಕ್ಕೊಳಗಾದ ಮಕ್ಕಳ ಮಾರ್ಫ್ ಫೋಟೊವನ್ನೂ ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ.
ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳು ಅತ್ಯಾಚಾರಕ್ಕೊಳಗಾದ ಬಾಲಕಿಯರ ಫೋಟೊಗಳನ್ನು ಬಹಿರಂಗಪಡಿಸುತ್ತಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ ಗಮನ ಹರಿಸಿತ್ತು. ಮಾಧ್ಯಮಗಳ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೋರ್ಟ್ ಇನ್ನು ಮುಂದೆ ಅತ್ಯಾಚಾರಕ್ಕೊಳಗಾದ ಮಕ್ಕಳ ಮಾರ್ಫ್ ಮಾಡಿರುವ ಫೋಟೊಗಳನ್ನು ಪ್ರಸಾರ ಮಾಡುವಂತಿಲ್ಲ ಎಂದು ಹೇಳಿದೆ.
ಬಿಹಾರದ ಆಶ್ರಯ ಮನೆಯಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದ ಸುಪ್ರೀಂ ಕೋರ್ಟ್, ಈ ಸಂಬಂಧ ಬಿಹಾರ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿಗೊಳಿಸಿದೆ. ಬಿಹಾರದಲ್ಲಿ ಎನ್ ಜಿಒ ಒಂದು ನಡೆಸುತ್ತಿರುವ ಆಶ್ರಯ ಮನೆಯಲ್ಲಿ 40 ಜನ ಯುವತಿಯರಿದ್ದು, ಈ ಪೈಕಿ ಬಹುತೇಕರ ಮೇಲೆ ಲೈಂಗಿಕ ಕ್ರಿಯೆ ನಡೆದಿದೆ ಎಂದು ತಿಳಿದುಬಂದಿತ್ತು. ವಿಷಯ ಬಹಿರಂಗವಾಗುತ್ತಿದ್ದಂತೆಯೇ ಎನ್ ಜಿಒ ವನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದ್ದು ಯುವತಿಯರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


