ದೇಶ

ಕುಪ್ವಾರ ಎನ್ ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಉಗ್ರರು ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲ ಬಿಚ್ಚಿದ್ದು, ಚೆಕ್ ಪೋಸ್ಟ್ ಬಳಿ ಕಾರ್ಯ ನಿರ್ವಹಿಸುತ್ತಿದ್ದ ಸೇನಾಪಡೆಗಳ ಮೇಲೆ ದಿಢೀರ್ ಗುಂಡಿನ ದಾಳಿ ನಡೆಸಿ ಸೇನಾ ಪಡೆಗಳ ಗುಂಡೇಟಿಗೆ ಬಲಿಯಾಗಿದ್ದಾರೆ.

ಕುಪ್ವಾರ ಎನ್ ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಉಗ್ರರು ಹತ
ಸಂಗ್ರಹ ಚಿತ್ರ
Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲ ಬಿಚ್ಚಿದ್ದು, ಚೆಕ್ ಪೋಸ್ಟ್ ಬಳಿ ಕಾರ್ಯ ನಿರ್ವಹಿಸುತ್ತಿದ್ದ ಸೇನಾಪಡೆಗಳ ಮೇಲೆ ದಿಢೀರ್ ಗುಂಡಿನ ದಾಳಿ ನಡೆಸಿ ಸೇನಾ ಪಡೆಗಳ ಗುಂಡೇಟಿಗೆ ಬಲಿಯಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹೊರವಲಯದ ಲೋಲಬ್ ವ್ಯಾಲಿ ಚೆಕ್ ಪೋಸ್ಟ್ ಬಳಿ ಈ ಘಟನೆ ನಡೆದಿದ್ದು, ಚೆಕ್ ಪೋಸ್ಟ್ ಗೆ ಆಗಮಿಸುತ್ತಿದ್ದ ವಾಹನಗಳನ್ನು ಭದ್ರತಾ ಸಿಬ್ಬಂದಿ ಶೋಧ ನಡೆಸುತ್ತಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ ಉಗ್ರರು ದಿಢೀರ್ ಗುಂಡಿನ ದಾಳಿ ನಡೆಸಿದ್ದಾರೆ.
ಕೂಡಲೇ ಎಚ್ಚೆತ್ತ ಯೋದರು ಉಗ್ರರ ಮೇಲೆ ಪ್ರತಿ ದಾಳಿ ನಡೆಸಿದ್ದು, ಈ ವೇಳೆ ಇಬ್ಬರು ಉಗ್ರರು ಹತರಾಗಿದ್ದಾರೆ. ಪ್ರಸ್ತುತ ಘಟನಾ ಪ್ರದೇಶದಲ್ಲಿ ಸೇನಾಪಡೆಗಳು ಶೋಧ ಕಾರ್ಯ ನಡೆಸುತ್ತಿದ್ದು, ಹತರಾಗಿರುವ ಉಗ್ರರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. 
ಈ ಬಗ್ಗೆ ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ಎಸ್ ಪಿ ವೈದ್ ಅವರು, ಲೋಲಬ್ ವ್ಯಾಲಿ ಚೆಕ್ ಪೋಸ್ಟ್  ಬಳಿ ಸೇನಾಪಡೆಗಳ ಮೇಲೆ ದಾಳಿ ಮಾಡಿದ್ದ ಇಬ್ಬರು ಉಗ್ರರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.