ಬಿಜೆಪಿ ಸರ್ಕಾರ ಮಾಧ್ಯಮಗಳನ್ನು ಬೆದರಿಸುತ್ತಿದೆ: ಕಾಂಗ್ರೆಸ್
ಮೋದಿ ಸರ್ಕಾರದ ವಿರುದ್ಧ ಆರೋಪಗಳನ್ನು ಮುಂದುವರೆಸಿರುವ ಕಾಂಗ್ರೆಸ್ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಮಾಧ್ಯಮಗಳ ಮೇಲೆ ಒತ್ತಡ ಹೇರುತ್ತಿದೆ, ಬೆದರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.

Published On :
ನವದೆಹಲಿ: ಮೋದಿ ಸರ್ಕಾರದ ವಿರುದ್ಧ ಆರೋಪಗಳನ್ನು ಮುಂದುವರೆಸಿರುವ ಕಾಂಗ್ರೆಸ್ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಮಾಧ್ಯಮಗಳ ಮೇಲೆ ಒತ್ತಡ ಹೇರುತ್ತಿದೆ, ಬೆದರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪ ಮಾಡಿದ್ದಾರೆ.
ಮೋದಿ ಸರ್ಕಾರದ ವಿರುದ್ಧ ಏನನ್ನೇ ಬರೆದರೂ ಅಂತಹ ಮಾಧ್ಯಮಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದು, ಮೋದಿ ಹೇಳುವುದು ಸತ್ಯವೋ ಸುಳ್ಳೋ ಎಂದು ಪರೀಕ್ಷಿಸಲು ಹೊರಟ ಒಂದು ನ್ಯೂಸ್ ಚಾನಲ್ ನ ಇಬ್ಬರು ಪತ್ರಕರ್ತರನ್ನು ಸಂಸ್ಥೆಯಿಂದ ತೆಗೆದುಹಾಕಲಾಗಿದೆ ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ಆರೋಪವನ್ನು ಆಡಳಿತಾರೂಢ ಬಿಜೆಪಿ ತಳ್ಳಿಹಾಕಿದ್ದು, ಮಾಹಿತಿ ಮತ್ತು ಪ್ರಸಾರ ಸಚಿವ ರಾಜ್ಯವರ್ಧನ್ ರಾಥೋಡ್ ಸ್ವತಃ ಪ್ರತಿಕ್ರಿಯೆ ನೀಡಿದ್ದು, ನ್ಯೂಸ್ ಚಾನಲ್ ಮೊದಲಿಗೆ ಪ್ರಸಾರ ಮಾಡಿದ್ದ ಸುದ್ದಿ ತಪ್ಪಾಗಿತ್ತು, ಆದರೆ ಅದಕ್ಕಾಗಿ ಶೋಕಾಸ್ ನೊಟೀಸ್ ಜಾರಿಗೊಳಿಸಿಲ್ಲ. ಆದರೆ ಎಲ್ಲದ್ದಕ್ಕೂ ಸರ್ಕಾರವನ್ನು ದೂರುವುದು ವಿಪಕ್ಷಗಳ ಹವ್ಯಾಸ ಎಂದು ಹೇಳಿದ್ದಾರೆ.
ಸಂಸತ್ ನ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ, ಬರಹ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆರ್ಟಿಕಲ್ 19 ರ ಅಡಿಯಲ್ಲಿ ಅವಕಾಶವಿದೆ. ಆದರೆ ಮಾಧ್ಯಮಗಳ ಮೇಲೆಯೇ ನಿಷೇಧ ವಿಧಿಸುವುದು ವಿಷಾದನೀಯ, ಸರ್ಕಾರದ ವಿರುದ್ಧ ಬರೆದವರು ಹಾಗೂ ಸರ್ಕಾರ ಹೇಳುತ್ತಿರುವ ನೈಜತೆಯನ್ನು ಪರೀಕ್ಷಿಸಲು ನಿಂತರೆ ಅಂತಹವರನ್ನು ಬೆದರಿಸಿ, ಸದ್ದಡಗಿಸಲಾಗುತ್ತಿದೆ ಎಂದು ಖರ್ಗೆ ಆರೋಪಿಸಿದ್ದರು. ಇದಕ್ಕೆ ಉದಾಹರಣೆಯನ್ನೂ ನೀಡಿದ್ದ ಖರ್ಗೆ, ಮೋದಿ ಹೇಳಿದ್ದರ ಬಗ್ಗೆ ರಿಯಾಲಿಟಿ ಚೆಕ್ ಮಾಡಲು ಯತ್ನಿಸಿದ ಎಬಿಪಿ ನ್ಯೂಸ್ ಚಾನಲ್ ನ ಇಬ್ಬರು ಹಿರಿಯ ನೌಕರರನ್ನು ರಾಜೀನಾಮೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಆದರೆ ಮಧ್ಯ ಪ್ರವೇಶಿಸಿದ ಸ್ಪೀಕರ್ ಸುಮಿತ್ರಾ ಮಹಾಜನ್, ಈ ವಿಷಯ ಖಾಸಗಿ ಮಾಧ್ಯಮವೊಂದಕ್ಕೆ ಸಂಬಂಧಿಸಿದ್ದಾಗಿದೆ ಎಂದು ಹೇಳಿದ್ದರೆ ಅಷ್ಟೇ ಅಲ್ಲದೇ ನೀವು ಆರೋಪ ಮಾಡುತ್ತಿರುವ ವಿಷಯದ ಬಗ್ಗೆ ಸೂಕ್ತ ಅಂಕಿ-ಅಂಶಗಳಿವೆಯೇ ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


