ವಸತಿ ನಿಲಯಗಳಲ್ಲಿ ಲೈಂಗಿಕ ಶೋಷಣೆ : ನಾಚಿಕೆಪಡುವಂತಹದ್ದು- ನಿತಿಶ್ ಕುಮಾರ್
ಬಿಹಾರ ರಾಜ್ಯದ ಮುಜಾಫರ್ ಪುರ್ ನಲ್ಲಿ ಸರ್ಕಾರದ ವಸತಿ ನಿಲಯಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ನಿತಿಶ್ ಕುಮಾರ್ ಮೌನ ಮುರಿದಿದ್ದಾರೆ.

ಮುಜಾಫರ್ ಪುರ್ : ಬಿಹಾರ ರಾಜ್ಯದ ಮುಜಾಫರ್ ಪುರ್ ನಲ್ಲಿ ಸರ್ಕಾರದ ವಸತಿ ನಿಲಯಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ನಿತಿಶ್ ಕುಮಾರ್ ಮೌನ ಮುರಿದಿದ್ದಾರೆ.
ಇಂತಹ ಪ್ರಕರಣಗಳು ಸರ್ಕಾರಕ್ಕೆ ನಾಚಿಕೆಯನ್ನುಂಟು ಮಾಡುವಂತಿದ್ದು, ತಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದ್ದು ಪಾಟ್ನಾ ಹೈಕೋರ್ಟ್ ತನಿಖೆಯನ್ನು ನಿರ್ವಹಿಸಬೇಕು ಎಂದು ನಿತಿಶ್ ಕುಮಾರ್ ಹೇಳಿದರು.
ಸಂಸತ್ ಅಧಿವೇಶನ ಹಾಗೂ ಬಿಹಾರ ಆಸೆಂಬ್ಲಿಯಲ್ಲಿ ಈ ವಿಚಾರ ಪ್ರತಿಧ್ವನಿಸಿದ ಬಳಿಕ ನಿತಿಶ್ ಕುಮಾರ್ ಇದೇ ಮೊದಲ ಬಾರಿಗೆ ಇಂತಹ ಹೇಳಿಕೆ ನೀಡಿದ್ದಾರೆ.ಯಾರೂ ಆತಂಕಪಡಬೇಕಾಗಿಲ್ಲ ತಪಿಸ್ಥತರಸ್ಥರನ್ನು ಶೀಘ್ರದಲ್ಲಿಯೇ ಪತ್ತೆ ಹಚ್ಚುವುದಾಗಿ ಅವರು ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


