2019 ರ ಲೋಕಸಭಾ ಚುನಾವಣೆ ಫಲಿತಾಂಶ ನಂತರ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಘೋಷಣೆ
2019 ರ ಲೋಕಸಭಾ ಚುನಾವಣೆ ನಂತರ ಪ್ರತಿಪಕ್ಷಗಳು ಪ್ರಧಾನಿ ಅಭ್ಯರ್ಥಿಯನ್ನು ಘೋಷಣೆ ಮಾಡಲಿವೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿ: 2019 ರ ಲೋಕಸಭಾ ಚುನಾವಣೆ ನಂತರ ಪ್ರತಿಪಕ್ಷಗಳು ಪ್ರಧಾನಿ ಅಭ್ಯರ್ಥಿಯನ್ನು ಘೋಷಣೆ ಮಾಡಲಿವೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಮುಂಬರುವ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರಮೋದಿ ವಿರುದ್ಧ ಹೋರಾಟ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಈಗಾಗಲೇ ಹೇಳಿದ್ದಾರೆ. ವಾರದ ಹಿಂದಷ್ಟೇ ರಾಹುಲ್ ಗಾಂಧಿ ಅವರೇ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ಹೇಳಿಕೆ ನೀಡಿದ್ದಾರೆ.
ರಾಹುಲ್ ಗಾಂಧಿ ಅವರನ್ನೇ ಮುಂದಿಟ್ಟುಕೊಂಡು ಚುನಾವಣೆಯಲ್ಲಿ ಹೋರಾಟ ನಡೆಸಲಾಗುವುದು, ಸ್ವಾಭಾವಿಕವಾಗಿಯೇ ಅವರೇ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂದು ಸುರ್ಜೇವಾಲಾ ಹೇಳಿದ್ದರು.
ಮೂಲಗಳ ಪ್ರಕಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಮೈತ್ರಿ ರಚಿಸಲು ಕಾರ್ಯತಂತ್ರ ರೂಪಿಸುತ್ತಿದೆ. ಈ ಮಧ್ಯೆ ಮುಂದಿನ ಚುನಾವಣೆಯಲ್ಲಿ ರಾಯ್ ಬರೇಲಿಯಿಂದ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ ಅಥವಾ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಚುನಾವಣೆಯಲ್ಲಿ ನಿಲ್ಲುತ್ತಾರಾ ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


