ವಸತಿನಿಲಯಗಳಲ್ಲಿ ಲೈಂಗಿಕ ಕಿರುಕುಳ : ನಿತಿಶ್ ವಿರುದ್ಧ ಆರ್ ಜೆಡಿ ಪ್ರತಿಭಟನೆಯಲ್ಲಿ ರಾಹುಲ್ ಭಾಗಿ
ಬಿಹಾರದಲ್ಲಿ ವಸತಿ ನಿಲಯಗಳಲ್ಲಿ ಲೈಂಗಿಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನಿತಿಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಕರೆ ನೀಡಿರುವ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ.

ಮುಜಾಫರ್ ಪುರ್ : ಬಿಹಾರದಲ್ಲಿ ವಸತಿ ನಿಲಯಗಳಲ್ಲಿ ಲೈಂಗಿಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನಿತಿಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಕರೆ ನೀಡಿರುವ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ.
ನವದೆಹಲಿಯ ಜಂಥರ್ ಮಂಥರ್ ಬಳಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಹಲವು ಪಕ್ಷಗಳ ನಾಯಕರು ಪಾಲ್ಗೊಳ್ಳಲಿದ್ದಾರೆ. ರಾಹುಲ್ ಗಾಂಧಿ ಕೂಡಾ ಭಾಗವಹಿಸಲಿದ್ದಾರೆ ಎಂದು ತೇಜಸ್ವಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಖೈದಿಗಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 24 ರಂದು ಮುಜಾಫರ್ ಪುರ್ ನ ವಸತಿ ನಿಲಯದಲ್ಲಿನ 11 ನೌಕರರನ್ನು ಬಂಧಿಸಲಾಗಿದ್ದು, 44 ಬಾಲಕಿಯರನ್ನು ರಕ್ಷಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿನ್ನೆ ಬಿಹಾರ ಸರ್ಕಾರಕ್ಕೆ ಸುಮೊಟೊ ನೋಟಿಸ್ ನೀಡಿದ್ದು, ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ.
ವಸತಿ ನಿಲಯದಲ್ಲಿನ ಮಾಲೀಕ ಬ್ರಜೇಶ್ ಠಾಕೂರ್ ಪೋಟೋ ಆರೋಪಿತರ ಪಟ್ಟಿಯಲ್ಲಿ ಬೆಳಕಿಗೆ ಬರುತ್ತಿದ್ದಂತೆ ನಿತಿಶ್ ಕುಮಾರ್ ರಾಜೀನಾಮೆಗೆ ಒತ್ತಡ ಹೆಚ್ಚಾಗಿ ಕೇಳಿಬರುತ್ತಿದೆ. ಠಾಕೂರ್ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


