ಕಾಂಗ್ರೆಸ್ ಕಾರ್ಯಕಾರಿಣಿ ಸಭೆ : ಮೋದಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪ್ರಚಾರ ಕೈಗೊಳ್ಳಲು ನಿರ್ಧಾರ-ರಣದೀಪ್ ಸುರ್ಜಿವಾಲಾ
ಪ್ರಧಾನಿ ನರೇಂದ್ರಮೋದಿ ಸರ್ಕಾರದಲ್ಲಿನ ಬ್ಯಾಂಕ್ ಹಗರಣ, ರಾಫೆಲ್ ಒಪ್ಪಂದ, ಹದಗೆಟ್ಟ ಆರ್ಥಿಕ ಪರಿಸ್ಥಿತಿ ಮತ್ತಿತರ ಭ್ರಷ್ಟಾಚಾರ ವಿಚಾರದ ಬಗ್ಗೆ ಪ್ರಚಾರ ಕೈಗೊಳ್ಳಲು ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ನವದೆಹಲಿ: ಪ್ರಧಾನಿ ನರೇಂದ್ರಮೋದಿ ಸರ್ಕಾರದಲ್ಲಿನ ಬ್ಯಾಂಕ್ ಹಗರಣ, ರಾಫೆಲ್ ಒಪ್ಪಂದ, ಹದಗೆಟ್ಟ ಆರ್ಥಿಕ ಪರಿಸ್ಥಿತಿ ಮತ್ತಿತರ ಭ್ರಷ್ಟಾಚಾರ ವಿಚಾರದ ಬಗ್ಗೆ ಪ್ರಚಾರ ಕೈಗೊಳ್ಳಲು ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ನಡೆದ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ ವಿವಾದದ ಬಗ್ಗೆಯೂ ಚರ್ಚೆ ನಡೆಸಲಾಯಿತು.
ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್, ನಾಯಕರಾದ ಎ. ಕೆ. ಆಂಟೋನಿ, ಗುಲಾಂ ನಬಿ ಅಜಾದ್, ಮಲ್ಲಿಕಾರ್ಜುನ್ ಖರ್ಗೆ, ಅಹ್ಮದ್ ಪಟೇಲ್, ಅಶೋಕ್ಲ್ ಗೆಹ್ಲೊಟ್, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರ ನಾಯಕರು ಪಾಲ್ಗೊಂಡಿದ್ದರು. ಆದಾಗ್ಯೂ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಈ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ.
ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ನಾದ ನಂತರ ಹೊಸದಾಗಿ ನೇಮಕಗೊಂಡ ಕಾಂಗ್ರೆಸ್ ಕಾರ್ಯಕಾರಿಣಿಯ ಇದು ಎರಡನೇ ಸಭೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


