ನಕ್ಸಲ್ ಭಯ: ಆರ್ಟೀರಿಯಲ್ ರಸ್ತೆ ಯೋಜನೆ ಕೈಬಿಟ್ಟ ಗುತ್ತಿಗೆದಾರರು, ಕಾಮಗಾರಿ ಪೂರ್ಣಗೊಳಿಸಿದ ಯೋಧರು!
ಇದೇ ಮೊದಲ ಬಾರಿಗೆ ಸಿಆರ್ ಪಿಎಫ್ ಬಂದೂಕು ಹಿಡಿಯುವ ಬದಲು ರಸ್ತೆ ನಿರ್ಮಾಣ ಕಾಮಗಾರಿಗೆ ಕೈಹಾಕಿದೆ. ಈ ಬೆಳವಣಿಗೆ ನಡೆದಿರುವುದು ಚತ್ತೀಸ್ ಗಢದ ನಕ್ಸಲ್ ಪೀಡಿತ ಪ್ರದೇಶದಲ್ಲಿ.

Published On :
ನವದೆಹಲಿ: ಇದೇ ಮೊದಲ ಬಾರಿಗೆ ಸಿಆರ್ ಪಿಎಫ್ ಬಂದೂಕು ಹಿಡಿಯುವ ಬದಲು ರಸ್ತೆ ನಿರ್ಮಾಣ ಕಾಮಗಾರಿಗೆ ಕೈಹಾಕಿದೆ. ಈ ಬೆಳವಣಿಗೆ ನಡೆದಿರುವುದು ಚತ್ತೀಸ್ ಗಢದ ನಕ್ಸಲ್ ಪೀಡಿತ ಪ್ರದೇಶದಲ್ಲಿ.
ಚತ್ತೀಸ್ ಗಢದ ಬಸ್ತಾರ್ ನಕ್ಸಲ್ ಪೀಡಿತ ಪ್ರದೇಶ. ಇದೇ ಭಾಗದಲ್ಲಿ ನಿರ್ಮಾಣವಾಗಬೇಕಿದ್ದ ಆರ್ಟಿರಿಯಲ್ ರಸ್ತೆ ಯೋಜನೆಗೆ ಸಾಕಷ್ಟು ಭದ್ರತೆ ಒದಗಿಸುವುದಾಗಿ ಭರವಸೆ ನೀಡಿದ ಹೊರತಾಗಿಯೂ ಯೋಜನೆಯನ್ನು ಕೈಗೆತ್ತಿಕೊಳ್ಳಲು ಯಾವುದೇ ಗುತ್ತಿಗೆದಾರರೂ ಸಹ ಮುಂದೆ ಬರಲಿಲ್ಲ. ಆದರೆ ಆಪತ್ಬಾಂಧವನ ಪಾತ್ರ ವಹಿಸುವುದರಲ್ಲಿ ಸದಾ ಮುಂದಿರುವ ಸೇನೆ ಈ ಯೋಜನೆಯನ್ನು ಕೈಗೆತ್ತಿಕೊಂಡಿದ್ದಿದ್ದು ಗುತ್ತಿಗೆದಾರನ ಪಾತ್ರ ವಹಿಸಲು ಮುಂದಾಗಿದೆ.
ನಕ್ಸಲರನ್ನು ಬೇಟೆಯಾಡುವುದರಲ್ಲಿ ನಿರತವಾಗಿರುತ್ತಿದ್ದ ಸಿಆರ್ ಪಿಎಫ್ ತಂಡ ಇದೇ ಮೊದಲ ಬಾರಿಗೆ ರಸ್ತೆ ನಿರ್ಮಾಣ ಕಾಮಗಾರಿಗೆ ಮುಂದಾಗಿದ್ದು, ದಕ್ಷಿಣ ಬಿಜಾಪುರ್ ಜಿಲ್ಲೆಯಲ್ಲಿನ ಭೈರಮ್ ಘರ್ ಹಾಗೂ ಕೆಶ್ಕುತುರ್ ನಡುವೆ 4.5 ಕಿಮೀ ವ್ಯಾಪ್ತಿಯ ಆರ್ ಸಿ ಸಿ ರಸ್ತೆಯನ್ನು ಪೂರ್ಣಗೊಳಿಸುವ ಜವಾಬ್ದಾರಿ ಹೊತ್ತುಕೊಂಡಿದೆ.
ನಕ್ಸಲರಿಗೆ ಭಯಪಟ್ಟು ರಸ್ತೆ ನಿರ್ಮಾಣ ಕಾಮಗಾರಿಯ ಯೋಜನೆಯನ್ನು ಕೈಗೆತ್ತಿಕೊಳ್ಳುವುದಕ್ಕೆ ಯಾವುದೇ ಖಾಸಗಿ ಗುತ್ತಿಗೆದಾರನೂ ಮುಂದಾಗಲಿಲ್ಲ, ಸಿಆರ್ ಪಿಎಫ್ ಕೈಗೆತ್ತಿಕೊಂಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪೆರ್ಮಪಾರಾದಲ್ಲಿ ಕಲ್ವರ್ಟ್ ನ್ನು ಮಾತ್ರ ನಿರ್ಮಾಣ ಮಾಡಬೇಕಿದೆ. ಮುಂಗಾರಿನಿಂದ ಕಾಮಗಾರಿ ನಿಧಾನಗತಿಯಲ್ಲಿದ್ದು, ಶೀಘ್ರವೇ ಪೂರ್ಣಗೊಳಿಸಲಾಗುತ್ತದೆ ಎಂದು ಸಿಆರ್ ಪಿಎಫ್ ಇನ್ಸ್ಪೆಕ್ಟರ್ ಜನರಲ್ ಸಂಜಯ್ ಅರೋರ ಮಾಹಿತಿ ನೀಡಿದ್ದಾರೆ.
191ನೇ ಬೆಟಾಲಿಯನ್ ನ ಕಮಾಂಡಿಂಗ್ ಅಧಿಕಾರಿ ಈ ಯೋಜನೆಗೆ ಗುತ್ತಿಗೆದಾರರಾಗಿದ್ದು, ಸಿಆರ್ ಪಿಎಫ್ ನ ಇಂಜಿನಿಯರ್ ಗಳು 2015 ರಿಂದ ಈ ಉಸ್ತುವಾರಿ ವಹಿಸಿದ್ದಾರೆ. ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗೆ ಭದ್ರತೆ, ಆಹಾರಗಳನ್ನು ನೀಡಲಾಗಿದ್ದು, ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನೂ ಕಲ್ಪಿಸಲಾಗಿದೆ ಎಂದಿದ್ದಾರೆ ಸಿಆರ್ ಪಿಎಫ್ ಅಧಿಕಾರಿಗಳು.
ರಸ್ತೆ ನಿರ್ಮಾಣ ಕಾಮಗಾರಿ ಯೋಜನೆ ಹಲವು ವರ್ಷಗಳಿಂದ ಇತ್ತು, ಆದರೆ ಯಾವ ಖಾಸಗಿ ಗುತ್ತಿಗೆದಾರರೂ ನಕ್ಸಲರ ಭಯದಿಂದ ಅದನ್ನು ಕೈಗೆತ್ತಿಕೊಳ್ಳಲು ಮುಂದಾಗಿರಲಿಲ್ಲ ಎಂದು ಸಿಆರ್ ಪಿಎಫ್ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ChhattisgarhCRPFಸಿಆರ್ ಪಿಎಫ್ನಕ್ಸಲ್ ಪೀಡಿತ ಪ್ರದೇಶಚತ್ತೀಸ್ ಗಢArterial road ProjectNaxal-hit regionಆರ್ಟಿರಿಯಲ್ ರಸ್ತೆ ನಿರ್ಮಾಣ ಯೋಜನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


