ಜಮ್ಮು-ಕಾಶ್ಮೀರ: ಗಂಗೇರಾ ಪರ್ವಾತಗಳ ಬಳಿ ಗುಂಡಿನ ಮೊರೆತ
ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿರುವ ಗಂಗೇರಾ ಪರ್ವತಗಳ ಬಳಿ ಬಂದಿರುವ ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ಗುಂಡಿನ ದಾಳಿ ನಡೆಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ...

Published On :
ಉಧಂಪುರ: ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿರುವ ಗಂಗೇರಾ ಪರ್ವತಗಳ ಬಳಿ ಬಂದಿರುವ ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ಗುಂಡಿನ ದಾಳಿ ನಡೆಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಉಧಂಪುರದ ಪೊಲೀಸ್ ಅಧಿಕಾರಿ ತಬುಸ್ಸುಮ್ ಪರ್ವೀನ್ ಅವರು ಮಾತನಾಡಿ, ಕಾರಿನಲ್ಲಿ ಬಂದಿರುವ ನಾಲ್ವರು ದುಷ್ಕರ್ಮಿಗಳು ಪರ್ವತದ ಬಳಿ ಹೋಗಿದ್ದಾರೆ. ಈ ವೇಳೆ ಮೂರು ಸುತ್ತಿನ ಗುಂಡುಗಳನ್ನು ಹಾರಿಸಿದ್ದಾರೆ. ಘಟನೆಯಲ್ಲಿ ಉಗ್ರರ ಕೈವಾಡವಿಲ್ಲ. ಸ್ಥಳೀಯ ದುಷ್ಕರ್ಮಿಗಳು ಕೃತ್ಯವೆಸಗಿರಬಹುದು ಎಂದು ಹೇಳಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿರುವ ಅಧಿಕಾರಿಗಳು ಗುಂಡುರಹಿತ ಖಾಲಿ ಶೆಲ್ ಗಳನ್ನು ವಶಕ್ಕೆ ಪಡೆಗುಕೊಂದಿದ್ದಾರೆ. ಪ್ರಕರಣ ಕುರಿತಂತೆ ಪ್ರಸ್ತುತ ತನಿಖೆ ನಡೆಸಲಾಗುತ್ತಿದ್ದು, ಈ ವರೆಗೂ ಯಾರೊಬ್ಬರನ್ನೂ ಬಂಧನಕ್ಕೊಳಪಡಿಸಿಲ್ಲ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


