ದೇಶ

ಎನ್ ಆರ್ ಸಿ ವಿಚಾರ: ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಮತ್ತೊಂದು ಎಫ್ ಐಆರ್

ಅಸ್ಸಾಂ ರಾಷ್ಟ್ರೀಯ ನಾಗರಿಕತ್ವ ನೋಂದಣಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರುದ್ದ ಇದೀಗ ಮತ್ತೊಂದು ಎಫ್ ಐಆರ್ ದಾಖಲಾಗಿದೆ.

ಎನ್ ಆರ್ ಸಿ ವಿಚಾರ: ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಮತ್ತೊಂದು ಎಫ್ ಐಆರ್
ಸಂಗ್ರಹ ಚಿತ್ರ
Published On :
ಗುವಾಹತಿ: ಅಸ್ಸಾಂ ರಾಷ್ಟ್ರೀಯ ನಾಗರಿಕತ್ವ ನೋಂದಣಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರುದ್ದ ಇದೀಗ ಮತ್ತೊಂದು ಎಫ್ ಐಆರ್ ದಾಖಲಾಗಿದೆ.
ಅಸ್ಸಾಂ ರಾಜಧಾನಿ ಗುವಾಹತಿಯ ಗೀತಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದೂರನ್ನು ಆಧರಿಸಿ ಪೊಲೀಸರು ಎಫ್ ಐಎರ್ ದಾಖಲಿಸಿದ್ದಾರೆ. ಆ ಮೂಲಕ ಮಮತಾ ಬ್ಯಾನರ್ಜಿ ವಿರುದ್ಧ ಈ ವರೆಗೂ ಒಟ್ಟು ಐದು ಎಫ್ ಐಆರ್ ಗಳು ದಾಖಲಾದಂತಾಗಿದ್ದು, ಈ ಹಿಂದೆ ಗುವಾಹತಿಯ ಪಾನ್ ಬಜಾಪ್ ಪೊಲೀಸ್ ಠಾಣೆ, ಮರಿಗಾಂವ್ ಜಿಲ್ಲೆಯ ಜಾಗಿರ್ ರೋಡ್ ಪೊಲೀಸ್ ಠಾಣೆ, ಉತ್ತರ ಲಖಿಮ್ ಪುರ್ ಪೊಲೀಸ್ ಠಾಣೆ ಮತ್ತು ಲೊರ್ಹಾತ್ ಪೊಲೀಸ್ ಠಾಣೆಗಳಲ್ಲಿ ಎಫ್ ಐಆರ್ ದಾಖಲಾಗಿತ್ತು.
ಕೇವಲ ಮಮತಾ ಬ್ಯಾನರ್ಜಿ ಮಾತ್ರವಲ್ಲದೇ ಪೊಲೀಸರು ಎಐಟಿಎಂಸಿ 8 ನಾಯಕರ ವಿರುದ್ಧವೂ ದೂರು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 
ಅಸ್ಸಾಂ ಎನ್ ಆರ್ ಸಿ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡಿದ್ದ ಮಮತಾ ಬ್ಯಾನರ್ಜಿ, ಅಕ್ರಮ ನುಸುಳುಕೋರರ ತಂಟೆಗೆ ಬಂದಲ್ಲಿ ದೇಶದಲ್ಲಿ ನಾಗರಿಕ ಯುದ್ಧ ನಡೆದು ರಕ್ತಪಾತವಾಗುತ್ತದೆ ಎಂದು ಹೇಳಿದ್ದರು. ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ರಾಜಕೀಯ ಪ್ರೇರಿತವಾಗಿ ಮಾಡಲಾಗುತ್ತಿದೆ. ಬಿಜೆಪಿ ಜನರನ್ನು ಒಡೆಯಲು ನೋಡುತ್ತಿದೆ. ಹೀಗೇ ಆದಲ್ಲಿ ದೇಶದಲ್ಲಿ ರಕ್ತಪಾತವಾಗಲಿದ್ದು, ನಾಗರಿಕ ಯುದ್ಧಕ್ಕೆ ಮುನ್ನಡಿಯಾಗಲಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.