ದೇಶ

ವಸತಿನಿಲಯಗಳಲ್ಲಿ ಲೈಂಗಿಕ ಕಿರುಕುಳ : ನಿತಿಶ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಬಿಹಾರ ರಾಜ್ಯದಲ್ಲಿನ ಮುಜಾಫರ್ ಪುರ್ ನಲ್ಲಿನ ವಸತಿನಿಲಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಖಂಡಿಸಿ ಜಂಥರ್ ಮಂಥರ್ ಬಳಿ ಆರ್ ಜೆಡಿ ಪ್ರತಿಭಟನೆ ನಡೆಸಿತು.

ವಸತಿನಿಲಯಗಳಲ್ಲಿ ಲೈಂಗಿಕ ಕಿರುಕುಳ :  ನಿತಿಶ್  ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ
Published On :
ನವದೆಹಲಿ: ಬಿಹಾರ ರಾಜ್ಯದ ಮುಜಾಫರ್ ಪುರ್ ಸೇರಿದಂತೆ ಹಲವು ವಸತಿನಿಲಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಖಂಡಿಸಿ ಜಂಥರ್ ಮಂಥರ್  ಬಳಿ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ನೇತೃತ್ವದಲ್ಲಿ   ಪ್ರತಿಭಟನೆ ನಡೆಯಿತು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ,  ಮಾಜಿ ರಾಜ್ಯಸಭಾ ಸದಸ್ಯ ಶರದ್ ಯಾದವ್ , ಎಡಪಕ್ಷದ ನಾಯಕರು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶದಲ್ಲಿನ ಮಹಿಳೆಯರ ರಕ್ಷಣೆ ನಮ್ಮ ನಿಲುವು ಆಗಿದೆ. ಅವರ ರಕ್ಷಣೆಗಾಗಿಯೇ ಇಲ್ಲಿ ನಾವೆಲ್ಲೂ ಸೇರಿದ್ದೇವೆ. ಒಂದು ವೇಳೆ ನಿತಿಶ್ ಕುಮಾರ್ ಅವರಿಗೆ ನಾಚಿಕೆಯಾಗಿದ್ದರೆ ಕೂಡಲೇ  ಕ್ರಮ ಕೈಗೊಳ್ಳಬೇಕು  ಎಂದು ರಾಹುಲ್ ಗಾಂಧಿ ಆಗ್ರಹಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.