ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಗೆ ಟಿಆರ್ ಎಸ್ ಮುಕ್ತ: ಕೆಸಿಆರ್
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಗೆ ತಮ್ಮ ಟಿಆರ್ ಎಸ್ ಪಕ್ಷ ಮುಕ್ತವಾಗಿದೆ ಎಂದು ತೆಲಂಗಾಣ ಸಿಎಂ ಮತ್ತು ಟಿಆರ್ ಎಸ್ ಪಕ್ಷದ ಅಧಿನಾಯಕ ಕೆ ಚಂದ್ರಶೇಖರರಾವ್ ಹೇಳಿದ್ದಾರೆ ಎನ್ನಲಾಗಿದೆ.

Published On :
ಹೈದರಾಬಾದ್: 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಗೆ ತಮ್ಮ ಟಿಆರ್ ಎಸ್ ಪಕ್ಷ ಮುಕ್ತವಾಗಿದೆ ಎಂದು ತೆಲಂಗಾಣ ಸಿಎಂ ಮತ್ತು ಟಿಆರ್ ಎಸ್ ಪಕ್ಷದ ಅಧಿನಾಯಕ ಕೆ ಚಂದ್ರಶೇಖರರಾವ್ ಹೇಳಿದ್ದಾರೆ ಎನ್ನಲಾಗಿದೆ.
ಶನಿವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಅವರು ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ಉಭಯ ನಾಯಕರು ಚುನಾವಣಾ ಪೂರ್ವ ಮೈತ್ರಿ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಅಂತೆಯೇ ಚುನಾವಣಾ ಪೂರ್ವ ಮೈತ್ರಿಯಿಂದ ತಮ್ಮ ಪಕ್ಷಕ್ಕೆ ಲಾಭವಾಗುವ ಸಾಧ್ಯತೆ ಕಡಿಮೆ ಇದ್ದು, ಚುನಾವಣೆಯಲ್ಲಿ ಬಿಜೆಪಿಗೆ ಸಂಖ್ಯಾಬಲ ಕಡಿಮೆ ಕಂಡುಬಂದಲ್ಲಿ ಮೈತ್ರಿ ಮಾಡಿಕೊಳ್ಳಲು ಹಿಂಜರಿಯುವುದಿಲ್ಲ ಎಂದು ಚಂದ್ರಶೇಖರ್ ರಾವ್ ಹೇಳಿದ್ದಾರೆ ಎನ್ನಲಾಗಿದೆ.
ಇತ್ತೀಚೆಗಷ್ಟೇ ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಮತದಾನ ಪ್ರಕ್ರಿಯೆಯಿಂದ ದೂರ ಸರಿಯುವ ಮೂಲಕ ಪರೋಕ್ಷವಾಗಿ ಟಿಆರ್‌ಎಸ್ ಮೋದಿ ಸರ್ಕಾರಕ್ಕೆ ಬೆಂಬಲ ನೀಡಿತ್ತು. ಎನ್ ಡಿಎ ಮೈತ್ರಿಕೂಟದದಿಂದ ಟಿಡಿಪಿ ಹಿಂದೆ ಸರಿದ ಬಳಿಕ ಬಿಜೆಪಿ ಈಗ ಟಿಆರ್ ಎಸ್‌ನೊಂದಿಗೆ ನಿಕಟತೆ ಹೊಂದಲು ಯತ್ನಿಸುತ್ತಿದೆ ಎನ್ನಲಾಗಿದೆ. ಅವಿಶ್ವಾಸ ಮತದ ಸಂದರ್ಭ ನಡೆದ ಚರ್ಚೆ ವೇಳೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರನ್ನು ಟೀಕಿಸಿದ್ದರು. ಅಂತೆಯೇ ತೆಲಂಗಾಣದ ಅಭಿವೃದ್ಧಿಗೆ ಸಿಎಂ ಕೆಸಿಆರ್ ಅವರನ್ನು ಪ್ರಶಂಸಿದ್ದನ್ನು ಇಲ್ಲಿ ಸ್ಮರಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
hyderabadಹೈದರಾಬಾದ್bjpಬಿಜೆಪಿKCRPM Modiಪ್ರಧಾನಿ ಮೋದಿಕೆಸಿಆರ್TRSಟಿಆರ್ ಎಸ್Loksabha Election 2018ಲೋಕಸಭಾ ಚುನಾವಣೆ 2018
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


