ಗುಜರಾತ್ ನಲ್ಲಿ ಬಿಜೆಪಿಗಿಂತ ಒಂದು ಹೆಚ್ಚು ಸ್ಥಾನ ಗೆಲ್ಲುವ ಗುರಿ: ಕಾಂಗ್ರೆಸ್
ಪ್ರಧಾನಿ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ ಬಿಜೆಪಿಗಿಂತ ಒಂದು ಸೀಟು ಹೆಚ್ಚಿಗೆ ಗೆಲ್ಲುವ ಉದ್ದೇಶ ನಮ್ಮದಾಗಿದೆ ಎಂದು ಎಐಸಿಸಿ ಉಸ್ತುವಾರಿ...

Published On :
ಗುಜರಾತ್: ಪ್ರಧಾನಿ ಮೋದಿ ಅವರ ತವರು ರಾಜ್ಯ ಗುಜರಾತ್ ನಲ್ಲಿ ಬಿಜೆಪಿಗಿಂತ ಒಂದು ಸೀಟು ಹೆಚ್ಚಿಗೆ ಗೆಲ್ಲುವ ಉದ್ದೇಶ ನಮ್ಮದಾಗಿದೆ ಎಂದು ಎಐಸಿಸಿ ಉಸ್ತುವಾರಿ ರಾಜೀವ್ ಸತಾವ್ ಹೇಳಿದ್ದಾರೆ,
ಕಳೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕಾಂಗ್ರೆಸ್ ತೀವ್ರ ಪೈಪೋಟಿ ನೀಡಿತ್ತು. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತಷ್ಟು ಹೆಚ್ಚಿನ ಸ್ಥಾನ ಗಳಿಸಲು ತಳಮಟ್ಟದಿಂದ ಪಕ್ಷವನ್ನು ಸಂಘಟಿಸಲಾಗುತ್ತಿದೆ
ಗುಜರಾತ್ ನಲ್ಲಿ 26 ಲೋಕಸಭೆ ಕ್ಷೇತ್ರಗಳಿದ್ದು, 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಸೀಟುಗಳನ್ನು ತನ್ನದಾಗಿಸಿಕೊಂಡಿತ್ತು. 2009ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು, 2019ರ ಚುನಾವಣೆಯಲ್ಲಿ ಸುಮಾರು 14 ಸೀಟು ಗೆಲ್ಲುವುದಾಗಿ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


