ದೇಶ

ರಾಜ್ಯಸಭೆ: ಆ.9ರಂದು ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ

ರಾಜ್ಯಸಭೆ ಉಪ ಸಭಾಪತಿ ಸ್ಥಾನಕ್ಕೆ ಆಗಸ್ಟ್ 9 ರಂದು ಚುನಾವಣೆ ನಡೆಸುವುದಾಗಿ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರು ಸೋಮವಾರ ಘೋಷಣೆ ಮಾಡಿದ್ದಾರೆ...

ರಾಜ್ಯಸಭೆ: ಆ.9ರಂದು ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ
ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು
Published On :
ನವದೆಹಲಿ: ರಾಜ್ಯಸಭೆ ಉಪ ಸಭಾಪತಿ ಸ್ಥಾನಕ್ಕೆ ಆಗಸ್ಟ್ 9 ರಂದು ಚುನಾವಣೆ ನಡೆಸುವುದಾಗಿ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರು ಸೋಮವಾರ ಘೋಷಣೆ ಮಾಡಿದ್ದಾರೆ. 
ಸಂಸತ್ತಿನ ಮೇಲ್ಮನೆಯಲ್ಲಿ ಘೋಷಣೆ ಮಾಡಿರುವ ಉಪ ರಾಷ್ಟ್ರಪತಿ ನಾಯ್ಡು ಅವರು, ಸಂಸತ್ತಿನಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನ ಕೊನೆಯ ಎರಡನೇ ದಿನದಂದು ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. 
ಪಿ.ಜೆ. ಕುರಿಯನ್ ಅವರು ರಾಜ್ಯಸಭೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದರು. ರಾಜ್ಯಸಭೆ ಸಾಕಷ್ಟು ಕೆಲಸವನ್ನು ಅವರೇ ಮಾಡುತ್ತಿದ್ದರು. ಕುರಿಯನ್ ಅವರು ಬಹುಮುಖ ವ್ಯಕ್ತಿತ್ವವನ್ನು ಹೊಂದಿದ್ದರು. ರಾಜ್ಯಸಭೆಯಲ್ಲಿ ಕಲಾಪಗಳು ಸುಗಮವಾಗಿ ಸಾಗುವಂತೆ ಮಾಡುತ್ತಿದ್ದರು. ನನ್ನ ಗಮನ ಸೆಳೆದ ವ್ಯಕ್ತಿಯಾಗಿದ್ದರು. ಮುಂಬರುವ ದಿನಗಳಲ್ಲಿ ಆಡಳಿತಾರೂಢ ಪಕ್ಷ ಹಾಗೂ ವಿರೋಧ ಪಕ್ಷಗಳು ಕುರಿಯನ್ ರಂತಹ ಸೂಕ್ತ ವ್ಯಕ್ತಿಯನ್ನೇ ಉಪ ಸಭಾಪತಿಯಾಗಿ ಆಯ್ಕೆ ಮಾಡಲಿವೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. 
ಪಿಜೆ. ಕುರಿಯನ್ ಅವರು ಜು.1 ರಂದು ರಾಜ್ಯಸಭಾ ಉಪ ಸಭಾಪತಿ ಸ್ಥಾನದಿಂದ ನಿವೃತ್ತಿ ಪಡೆದುಕೊಂಡಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.