ಸ್ವಾತಂತ್ರ್ಯ ದಿನಾಚರಣೆ ವೇಳೆ ಕಾಶ್ಮೀರದಲ್ಲಿ ದಾಳಿಗೆ ಲಷ್ಕರ್, ಜೈಷ್-ಇ-ಮೊಹಮ್ಮದ್ ಸಂಚು!
71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲು ಇಡೀ ದೇಶ ಸಿದ್ಧತೆಗಳನ್ನು ನಡೆಸುತ್ತಿದ್ದರೆ, ಅತ್ತ ಸ್ವಾತಂತ್ರ್ಯ ದಿನದ ವೇಳೆ ಕಾಶ್ಮೀರದ ಸೇನಾ ಶಿಬಿರಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಮೂಲಕ ಜೈಷ್-ಇ-ಮೊಹಮ್ಮದ್...

Published On :
ನವದೆಹಲಿ: 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲು ಇಡೀ ದೇಶ ಸಿದ್ಧತೆಗಳನ್ನು ನಡೆಸುತ್ತಿದ್ದರೆ, ಅತ್ತ ಸ್ವಾತಂತ್ರ್ಯ ದಿನದ ವೇಳೆ ಕಾಶ್ಮೀರದ ಸೇನಾ ಶಿಬಿರಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಮೂಲಕ ಜೈಷ್-ಇ-ಮೊಹಮ್ಮದ್ ಹಾಗೂ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರು ಸಂಚು ರೂಪಿಸಿದ್ದಾರೆಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.
ಗಡಿಯಲ್ಲಿನ ಸೇನಾ ಶಿಬಿರಗಳ ಮೇಲೆ 20 ಉಗ್ರರ ಮೂಲಕ ವಿಧ್ವಂಸಕ ಕೃತ್ಯವೆಸಗಲು ಜೈಷ್-ಇ-ಮೊಹಮ್ಮದ್ ಮತ್ತು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಪಿತೂರಿ ನಡೆಸುತ್ತಿವೆ ಎಂದು ತಿಳಿದುಬಂದಿದೆ.
ಅಂತಾರಾಷ್ಟ್ರೀಯ ಗಡಿ ರೇಖೆಯನ್ನು ದಾಟಿ ಬಂದು ಅಥವಾ, ಈಗಾಗಲೇ ದೇಶದೊಳಗೆ ನುಸುಳಿರುವ ಉಗ್ರರು ಈ ಕೃತ್ಯ ಎಸಗುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ.
ಉಗ್ರರು ಗಡಿ ರೇಖೆಯಲ್ಲಿರುವ ಚುರಾ ಎಂಬಲ್ಲಿ ಅಡಗಿ ಕುಳಿತಿದ್ದು. ಅಲ್ಲಿಂದಲೇ ತಂಗ್ದಾರ್ ಸೆಕ್ಟರ್ ನಲ್ಲಿರುವ ಸೇನಾ ಶಿಬಿರಗಳನ್ನು ಗುರಿಯಾಗಿಸಿ ದಾಳಿ ನಡೆಸಬಹುದು ಎಂದು ಹೇಳಲಾಗುತ್ತಿದೆ. ಈ ಉಗ್ರರು ಗಡಿ ಭದ್ರತಾ ಪಡೆಯ ಯೋಧ ಮೇಲೆ ದಾಳಿಗೆ ಸ್ಥಳೀಯರನ್ನು ಬಳಸಿಕೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


