ಕೆಎಂ ಜೋಸೆಫ್ ಪದೋನ್ನತಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಭೇಟಿ ಮಾಡಿದ ನ್ಯಾಯಾಧೀಶರು
ಕೇಂದ್ರ ಸರ್ಕಾರ ನ್ಯಾ.ಕೆಎಂ ಜೋಸೆಫ್ ಅವರ ಸೇವಾ ಹಿರಿತನವನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರುಗಳು ಭೇಟಿ

Published On :
ನವದೆಹಲಿ: ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರಾಗಿ ಆ.06 ರಂದು ಇಬ್ಬರು ನ್ಯಾಯಾಧೀಶರು ಪದೋನ್ನತಿ ಪಡೆಯುತ್ತಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರ ನ್ಯಾ.ಕೆಎಂ ಜೋಸೆಫ್ ಅವರ ಸೇವಾ ಹಿರಿತನವನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರನ್ನು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರುಗಳು ಭೇಟಿ ಮಾಡಿದ್ದಾರೆ.
ಕೊಲಿಜಿಯಂ ನ ಸದಸ್ಯರೂ ಆಗಿರುವ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರಾದ ನ್ಯಾ.ಎಂಬಿ ಲೋಕುರ್, ಕುರಿಯನ್ ಜೋಸೆಫ್ ಅವರು ನ್ಯಾ. ದೀಪಕ್ ಮಿಶ್ರಾ ಅವರನ್ನು ಭೇಟಿ ಮಾಡಿದ್ದು, ನ್ಯಾ.ಜೋಸೆಫ್ ಅವರ ವಿಷಯವನ್ನು ಪ್ರಸ್ತಾಪಿಸಿದ್ದು, ನ್ಯಾ.ದೀಪಕ್ ಮಿಶ್ರಾ ಈ ವಿಷಯವನ್ನು ನ್ಯಾ.ಗೊಗೋಯ್ ಅವರ ಬಳಿ ಚರ್ಚಿಸಿ ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಭ್ರವಸೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ಅಧಿಸೂಚನೆಯಲ್ಲಿ ಪದೋನ್ನತಿ ಪಡೆಯಲಿರುವ ಕೆಎಂ ಜೋಸೆಫ್ ಅವರ ಹೆಸರನ್ನು ಮೂರನೇ ಸ್ಥಾನದಲ್ಲಿರಿಸಿತ್ತು. ಆದರೆ ಕೇಂದ್ರ ಸರ್ಕಾರದ ನಡೆಯನ್ನು ತೀವ್ರವಾಗಿ ಆಕ್ಷೇಪಿಸಿರುವ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ನ್ಯಾ.ಕೆಎಂ ಜೋಸೆಫ್ ಅವರ ಸೇವಾ ಹಿರಿತನವನ್ನು ಕಡೆಗಣಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದೀಪಕ್ ಮಿಶ್ರಾಸಿಜೆಐSupreme Court judgesಸುಪ್ರೀಂ ಕೋರ್ಟ್ ನ್ಯಾಯಾಧೀಶರುCJI Dipak MisraJustice KM Josephನ್ಯಾ.ಕೆಎಂ ಜೋಸೆಫ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


