ಡಿಯೋರಿಯಾ: ಅಕ್ರಮ ವಸತಿ ನಿಲಯಕ್ಕೆ ಬೀಗಮುದ್ರೆ :24 ಯುವತಿಯರ ರಕ್ಷಣೆ
ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಅಕ್ರಮ ವಸತಿ ನಿಲಯಗಳ ಮೇಲೆ ರಾತ್ರಿ ಪೊಲೀಸರು ದಾಳಿ ನಡೆಸಿ ಬಾಗಿಲು ಜಡಿದಿದ್ದು, 24 ಯುವತಿಯರನ್ನು ರಕ್ಷಿಸಿದ್ದಾರೆ.

ಡಿಯೋರಿಯಾ: ಬಿಹಾರದ ಮುಜಾಫರ್ ಪುರ್ ವಸತಿ ನಿಲಯಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ರಾಷ್ಟ್ರಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿರುವಂತೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಅಕ್ರಮ ವಸತಿ ನಿಲಯಗಳು ಇರುವುದು ಕಂಡುಬಂದಿದೆ.
ಅಕ್ರಮ ವಸತಿ ನಿಲಯಗಳ ಮೇಲೆ ರಾತ್ರಿ ಪೊಲೀಸರು ದಾಳಿ ನಡೆಸಿ ಬಾಗಿಲು ಜಡಿದಿದ್ದು, 24 ಯುವತಿಯರನ್ನು ರಕ್ಷಿಸಿದ್ದಾರೆ. ವಸತಿ ನಿಲಯದ ಮ್ಯಾನೇಜರ್ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಈ ಪ್ರಕರಣದ ಬಗ್ಗೆ ತನಿಖೆ ನಡೆಸಲು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಬ್ಬರು ಸದಸ್ಯರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ನೇಮಿಸಿದ್ದಾರೆ.
ಅಕ್ರಮ ವಸತಿ ನಿಲಯಗಳ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆದ ನಂತರ ಪರಿಶೀಲನೆ ನಡೆಸಲಾಗಿದೆ ಎಂದು ಎಂದು ನಗರ ಹೆಚ್ಚುವರಿ ಮ್ಯಾಜಿಸ್ಟ್ರೇಟ್ ಪ್ರಫುಲ್ ತ್ರಿಪಾಠಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


