ಎಸ್ಸಿ / ಎಸ್ಟಿ ದೌರ್ಜನ್ಯ ಕಾನೂನು ಸರ್ಕಾರದ ತೃಪ್ತಿಪಡಿಸುವ ತಂತ್ರವಷ್ಟೆ; ಮಾಯಾವತಿ
ದಲಿತ ಸಮುದಾಯವನ್ನು ಉದ್ಧಾರ ಮಾಡುವಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಕಷ್ಟು ಪ್ರಯತ್ನ ...

ಲಕ್ನೊ: ದಲಿತ ಸಮುದಾಯವನ್ನು ಉದ್ಧಾರ ಮಾಡುವಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಾಕಷ್ಟು ಪ್ರಯತ್ನ ಮಾಡುತ್ತಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಆರೋಪಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ಹಿಂದುಳಿದ ವರ್ಗಗಳು ಸರ್ಕಾರದಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯುತ್ತಿಲ್ಲ. ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ಉದ್ಯೋಗಗಳಲ್ಲಿ ಮೀಸಲಾತಿ ಸೌಲಭ್ಯಗಳು ಸಿಗುತ್ತಿಲ್ಲ. ದಲಿತ ಸಚಿವರುಗಳು ಸಹ ಭಾರತೀಯ ಜನತಾ ಪಾರ್ಟಿ ಜೊತೆ ಸೇರಿಕೊಂಡು ಸಿದ್ಧಾಂತಗಳಲ್ಲಿ ರಾಜಿ ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.
ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರ ಸರ್ಕಾರ ದಲಿತರಿಗೆ ಮತ್ತು ಹಿಂದುಳಿದ ವರ್ಗಗಳಿಗೆ ಉಪಯೋಗವಾಗುವಂತಹ ಯಾವುದೇ ಕೆಲಸ ಮಾಡಿಲ್ಲ. ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಸಹ ದಲಿತರಿಗೆ ಸರಿಯಾದ ಪ್ರಯೋಜನ ಸಿಗುತ್ತಿಲ್ಲ. ಈ ದೇಶದ ದಲಿತರು ಮತ್ತು ಹಿಂದುಳಿದ ವರ್ಗಗಳು ಕೇಂದ್ರ ಸರ್ಕಾರದ ಆಡಳಿತ ವೈಖರಿಯಿಂದ ಬೇಸತ್ತಿದ್ದಾರೆ ಎಂದರು.
ಹಲವು ರಾಜ್ಯಗಳಲ್ಲಿ ಸದ್ಯದಲ್ಲಿಯೇ ಚುನಾವಣೆಗಳು ನಡೆಯಲಿವೆ. ಬಿಜೆಪಿ ಈ ಸಂದರ್ಭದಲ್ಲಿ ತೀವ್ರ ಒತ್ತಡದಲ್ಲಿದೆ. ಮುಂಬರುವ ಚುನಾವಣೆಯಲ್ಲಿ ಜನರ ವಿಶ್ವಾಸ ಗಳಿಸಲು ಕೇಂದ್ರ ಸರ್ಕಾರ ಎಸ್ ಸಿ/ಎಸ್ ಟಿ ದೌರ್ಜನ್ಯ ಕಾನೂನನ್ನು ಗಂಭೀರವಾಗಿ ತೆಗೆದುಕೊಂಡಿದ್ದು ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗವನ್ನು ಸ್ವಾಯತ್ತ ಸಂಸ್ಥೆಯನ್ನಾಗಿ ಮಾಡಿದೆ, ಇದು ಕೇವಲ ಚುನಾವಣೆ ಗಿಮಿಕ್ ಎಂದು ಆರೋಪಿಸಿದರು.
ಎಸ್ಸಿ/ಎಸ್ಟಿ ಸಮುದಾಯದ ಮೇಲೆ ದೌರ್ಜನ್ಯ ತಡೆ ಕಾಯ್ದೆ ನಿನ್ನೆ ಲೋಕಸಭೆಯಲ್ಲಿ ಅನುಮೋದನೆಗೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


