ಬಿಜೆಪಿ ಶಾಸಕರಿಂದ ಹೆಣ್ಣುಮಕ್ಕಳನ್ನು ರಕ್ಷಿಸುವ ಅಗತ್ಯವಿದೆ: ರಾಹುಲ್ ಗಾಂಧಿ
: ಬಿಜೆಪಿ ಶಾಸಕರಿಂದ ಹೆಣ್ಣು ಮಕ್ಕಳನ್ನು ರಕ್ಷಿಸುವ ಅಗತ್ಯವಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಹೇಳಿಕೆ ನೀಡಿದ್ದಾರೆ....

Published On :
ದೆಹಲಿ: ಬಿಜೆಪಿ ಶಾಸಕರಿಂದ ಹೆಣ್ಣು ಮಕ್ಕಳನ್ನು ರಕ್ಷಿಸುವ ಅಗತ್ಯವಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರ ಹೇಳಿಕೆ ನೀಡಿದ್ದಾರೆ.
ದೆಹಲಿಯ ಮಹಿಳಾ ಅಧಿಕಾರ್ ಸಮ್ಮೇಳನ್ ನಲ್ಲಿ ಮಾತನಾಡಿದ ಅವರು, ದೇಶವನ್ನು ಕೇವಲ ಪುರುಷರು ಮಾತ್ರ ಆಳ್ವಿಕೆ ನಡೆಸಬೇಕು ಎಂಬುದು ಬಿಜೆಪಿ ಮತ್ತು ಆರ್ ಎಸ್ ಎಸ್ ಸಿದ್ದಾಂತವಾಗಿದೆ ಎಂದು ದೂರಿದ್ದಾರೆ.
ಬಿಜೆಪಿಯವರು ಮಹಿಳೆಯರ ಬಗ್ಗೆ ಮಾತನಾಡುತ್ತಾರೆ, ಆದರೆ ಮಹಿಳಾ ಮೀಸಲಾತಿ ವಿಧೇಯಕ ಮಾತ್ರ ಪೆಂಡಿಂಗ್ ಉಳಿದಿದೆ, ಸರ್ಕಾರ ವಿಧೇಯಕ ಮಂಡಿಸಿದರೇ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದೆ, ಆದರೆ ಪ್ರಧಾನ ಮಂತ್ರಿಗಳು ಏನನ್ನೂ ಹೇಳುತ್ತಿಲ್ಲ, ಬೇಟಿ ಬಚಾವೋ ಬೇಟಿ ಪಡಾವೋ ಎಂದು ಹೇಳುವ ಬಿಜೆಪಿ ಮೀಸಲಾತಿ ವಿಧೇಯಕ ಜಾರಿಗೆ ತರಲು ಮುಂದಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳ ಸಂಬಂಧ ಪ್ರಧಾನಿ ತುಟಿ ಬಿಚ್ಚುತ್ತಿಲ್ಲ, ಕಳೆದ 70 ವರ್ಷಗಳಲ್ಲಿ ನಡೆಯದ ದೌರ್ಜನ್ಯ ಕೇವಲ 4 ವರ್ಷಗಳಲ್ಲಿ ಮಹಿಳೆಯರ ಮೇಲೆ ನಡೆದಿದೆ ಎಂದು ರಾಹುಲ್ ಆರೋಪಿಸಿದ್ದಾರೆ.
ಮಹಿಳಾ ಮೀಸಲಾತಿ ವಿಧೇಯಕವನ್ನು ಮಂಡಿಸಿದರೇ ನಾವು ವಿಧೇಯಕ ಪಾಸು ಮಾಡಲು ಸಂಪೂರ್ಣ ಬೆಂಬಲ ನೀಡುತ್ತೇವೆ, ಆದರೆ ಅವರು ಜಾರಿಗೆ ತರದಿದ್ದರೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಎಷ್ಟು ಸಾಧ್ಯವೋ ಅಷ್ಟು ಬೇಗ ವಿಧೇಯಕ ಜಾರಿಗೆ ತರುತ್ತೇವೆ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


