ದೇಶ

ಕನ್ವರ್ ಯಾತ್ರೆ: ಎರಡು ಗುಂಪುಗಳ ನಡುವೆ ಮಾರಾಮಾರಿ, 11 ಜನರಿಗೆ ಗಾಯ

ಕನ್ವರ್ ಯಾತ್ರೆ ಆಯೋಜನೆ ಕುರಿತಂತೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶಗ ಗ್ರೇಟರ್ ನೊಯ್ಡಾದಲ್ಲಿ ಮಂಗಳವಾರ ನಡೆದಿದೆ...

ಕನ್ವರ್ ಯಾತ್ರೆ: ಎರಡು ಗುಂಪುಗಳ ನಡುವೆ ಮಾರಾಮಾರಿ, 11 ಜನರಿಗೆ ಗಾಯ
ಸಂಗ್ರಹ ಚಿತ್ರ
Published On :
ನೊಯ್ಡಾ: ಕನ್ವರ್ ಯಾತ್ರೆ ಆಯೋಜನೆ ಕುರಿತಂತೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶಗ ಗ್ರೇಟರ್ ನೊಯ್ಡಾದಲ್ಲಿ ಮಂಗಳವಾರ ನಡೆದಿದೆ. 
ಕಳೆದ ವರ್ಷ ಎರಡೂ ಸಮುದಾಯಗಳು ಜೊತೆಗೂಡಿ ಯಾತ್ರೆಯನ್ನು ಆಯೋಜನೆ ಮಾಡಿತ್ತು. ಪ್ರಸಕ್ತ ವರ್ಷ ಯಾತ್ರೆಗೆ ಹಣ ಸಂಗ್ರಹಿಸುವ ವಿಚಾರ ಸಂಬಂಧ ಸಮುದಾಯಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಗುಂಪೊಂದು ಪ್ರತ್ಯೇಕವಾಗಿ ಯಾತ್ರೆನಡೆಸುವ ಕುರಿತು ಮಾತುಕತೆ ನಡೆಸಲು ಆರಂಭಿಸಿದಾಗ ಮತ್ತೊಂದು ಗುಂಪಿನವರು ಗಲಾಟೆ ಮಾಡಿದ್ದಾರೆ. ಬಳಿಕ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ 14 ಮಂದಿ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.