ಗಣರಾಜ್ಯೋತ್ಸವ ಅತಿಥಿಯಾಗಿ ಭಾರತಕ್ಕೆ ಟ್ರಂಪ್ ಆಗಮಿಸುವುದು ಅನುಮಾನ?
2019 ರ ಗಣರಾಜ್ಯೋತ್ಸವಕ್ಕೆ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮಿಸುವ ಸಾಧ್ಯತೆಗಳು ಕಡಿಮೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Published On :
ನವದೆಹಲಿ: 2019 ರ ಗಣರಾಜ್ಯೋತ್ಸವಕ್ಕೆ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮಿಸುವ ಸಾಧ್ಯತೆಗಳು ಕಡಿಮೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಭಾರತ ಸರ್ಕಾರ ಅಮೆರಿಕ ಅಧ್ಯಕ್ಷರಿಗೆ ಆಹ್ವಾನ ನೀಡಿರುವುದನ್ನು ಶ್ವೇತಭವನ ಖಚಿತಪಡಿಸಿದ್ದರೂ, ಉನ್ನತ ಮೂಲಗಳ ಪ್ರಕಾರ ಟ್ರಂಪ್ ಭಾರತದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸ ಸಾಧ್ಯತೆ ಕಡಿಮೆ ಇದೆ. ಅದೇ ದಿನಗಳಲ್ಲಿ ಟ್ರಂಪ್ ಗೆ ಬೇರೆ ಕಾರ್ಯಕ್ರಮಗಳಿರುವುದರಿಂದ ಭಾರತಕ್ಕೆ ಟ್ರಂಪ್ ಆಗಮನ ಸಾಧ್ಯವಿಲ್ಲ ಎನ್ನಲಾಗುತ್ತಿದೆ.
2015 ರಲ್ಲಿ ಭಾರತ ಸರ್ಕಾರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಂದಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಆಹ್ವಾನಿಸಿತ್ತು, ಬರಾಕ್ ಒಬಾಮ ಅತಿಥಿಯಾಗಿ ಪಾಲ್ಗೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಅಮೆರಿಕ-ಭಾರತ ನಡುವೆ ವಾಣಿಜ್ಯ ವಿಷಯಗಳಿಗೆ ಸಂಬಂಧಿಸಿದಂತೆ ತಲೆದೋರಿರುವ ಭಿನ್ನಾಭಿಪ್ರಾಯಗಳು ಹಾಗೂ ಇರನ ಜೊತೆಗಿನ ಭಾರತದ ದ್ವಿಪಕ್ಷೀಯ ಸಂಬಂಧ, ರಷ್ಯಾದಿಂದ ಶಸ್ತ್ರಾಸ್ತ್ರಗಳ ಆಮದು ಸೇರಿದಂತೆ ಹಲವು ವಿಷಯಗಳು ಟ್ರಂಪ್ ಭಾರತದ ಭೇಟಿಯ ನಿರ್ಧಾರದ ಮೇಲೆ ಪರಿಣಾಮ ಬೀರುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


