ರೈಲುಗಳೇಕೆ ಸರಿಯಾದ ಸಮಯಕ್ಕೆ ಬರುವುದಿಲ್ಲ?: ಸಿಎಜಿ ಬಳಿ ಇದೆ ಉತ್ತರ!
ಸಮಯಕ್ಕೆ ಸರಿಯಾಗಿ ರೈಲುಗಳ ಸಂಚಾರದ ಬಗ್ಗೆ ಗಮನ ಹರಿಸುವ ಬದಲು, ಪ್ರಯಾಣಿಕರ ಸೌಲಭ್ಯಗಳ ಸುಧಾರಣೆ, ರೈಲು ನಿಲ್ದಾಣದ ಹೊರನೋಟವನ್ನು ಚೆಂದಗೊಳುಸುವತ್ತ ಹೆಚ್ಚು ಗಮನ ಕೇಂದ್ರೀಕರಿಸುತ್ತಿರುವ

Published On :
ನವದೆಹಲಿ: ಸಮಯಕ್ಕೆ ಸರಿಯಾಗಿ ರೈಲುಗಳ ಸಂಚಾರದ ಬಗ್ಗೆ ಗಮನ ಹರಿಸುವ ಬದಲು, ಪ್ರಯಾಣಿಕರ ಸೌಲಭ್ಯಗಳ ಸುಧಾರಣೆ, ರೈಲು ನಿಲ್ದಾಣದ ಹೊರನೋಟವನ್ನು ಚೆಂದಗೊಳುಸುವತ್ತ ಹೆಚ್ಚು ಗಮನ ಕೇಂದ್ರೀಕರಿಸುತ್ತಿರುವ ಬಗ್ಗೆ ಸಿಎಜಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಈ ವಾರ ಸಂಸತ್ ನಲ್ಲಿ ಮಂಡನೆಯಾದ ಸಿಎಜಿ ವರದಿಯಲ್ಲಿ ರೈಲ್ವೆ ಇಲಾಖೆ ರೈಲುಗಳ ಸಮಯ ಪಾಲನೆ ಬಗ್ಗೆಯೂ ಉಲ್ಲೇಖಿಸಿರುವ ಸಿಎಜಿ, ನಿಲ್ದಾಣ ಅಭಿವೃದ್ಧಿ ಯೋಜನೆಗಳಲ್ಲಿ ಪ್ರಯಾಣಿಕರ ಸೌಲಭ್ಯಗಳ ಸುಧಾರಣೆ, ರೈಲು ನಿಲ್ದಾಣದ ಹೊರನೋಟದ ಬಗ್ಗೆಯೇ ಹೆಚ್ಚು ಗಮನಹರಿಸಲಾಗಿದೆಯೇ ಹೊರತು ರೈಲುಗಳ ಸಮಯ ಪಾಲನೆಯನ್ನು ಸುಧಾರಿಸುವ ಬಗ್ಗೆ ಹೆಚ್ಚು ಗಮನಹರಿಸಲಾಗಿಲ್ಲ ಎಂದು ಹೇಳಿದೆ.
15 ನಿಲ್ದಾಣಗಳಲ್ಲಿ ಪ್ರತಿ ದಿನ ನಿರ್ವಹಿಸಲ್ಪಡುವ ರೈಲುಗಳ ಸಂಖ್ಯೆ ಗಣನೀಯವಾಗಿ ಎರಿಕೆಯಾಗಿದೆ. ಆದರೆ ಪ್ಲ್ಯಾಟ್ಫಾರ್ಮ್ ಗಳು, ರೈಲು ನಿಲ್ದಾಣಗಳಲ್ಲಿನ ಲೈನ್ ಗಳ ಸ್ಥಿರತೆಯನ್ನೂ ಸಹ ಅದಕ್ಕೆ ತಕ್ಕಂತೆ ಸುಧಾರಣೆ ಮಾಡಲಾಗಿಲ್ಲ ಎಂದು ಸಿಎಜಿ ಹೇಳಿದೆ.
ಮಾರ್ಚ್ 2017 ರ ವರೆಗೂ ಇರುವ ಮಾಹಿತಿಯ ಪ್ರಕಾರ 15 ನಿಲ್ದಾಣಗಳಲ್ಲಿ 2,436 ರೈಲುಗಳನ್ನು ನಿರ್ವಹಣೆ ಮಾಡಲಾಗುತ್ತಿದೆ, ಈ ಪಕಿ 638 ರೈಲುಗಳು 24 ಅಥವಾ ಅದಕ್ಕಿಂತ ಹೆಚ್ಚು ಕೋಚ್ ಗಳನ್ನು ಹೊಂದಿದ್ದು, ಪ್ರತಿ ನಿತ್ಯ ಸಂಚರಿಸುತ್ತವೆ. ಈ ರೈಲುಗಳ ನಿಲುಗಡೆಗೆ ಪೂರಕವಾಗಿ ಸಾಕಷ್ಟು ಉದ್ದವಿರುವ ಪ್ಲ್ಯಾಟ್ಫಾರ್ಮ್ ಅಗತ್ಯವಿದ್ದು, ಲೈನ್ ಗಳ ಸ್ಥಿರತೆಯನ್ನೂ ಕಾಯ್ದುಕೊಳ್ಳಬೇಕಿದೆ ಎಂದು ಸಿಎಜಿ ವರದಿ ಹೇಳಿದೆ.
ಸಾಕಷ್ಟು ಪ್ಲಾಟ್ಫಾರ್ಮ್ ಗಳ ಕೊರತೆ ಇರುವುದು ಸಹ ರೈಲುಗಳು ಸರಿಯಾದ ಸಮಯಕ್ಕೆ ಬಾರದೇ ಇರುವುದಕ್ಕೆ ಇರುವ ಪ್ರಮುಖ ಕಾರಣ ಎಂದು ಸಿಎಜಿ ತನ್ನ ವರದಿಯಲ್ಲಿ ಹೇಳಿದೆ. ರೈಲುಗಳ ಸಮಯ ಪಾಲನೆಗೆ ಸಿಎಜಿ ರೈಲ್ವೆಯ ಎಲ್ಲಾ ವಿಭಾಗಗಳಿಗೂ ಕೆಲವು ಸಲಹೆ ಸೂಚನೆಗಳನ್ನು ನೀಡಿದ್ದು, ಸಮಗ್ರ ಯೋಜನೆಯನ್ನು ರೂಪಿಸಬೇಕೆಂದು ಹೇಳಿದೆ. ಮುಂದಿನ ಹಂತದ ಯೋಜನೆಯನ್ನು ರೂಪಿಸುವಾಗ ಹೆಚ್ಚು ಪ್ಲಾಟ್ ಫಾರ್ಮ್ ಗಳನ್ನು ಸೇರಿಸುವುದರ ಬಗ್ಗೆಯೂ ರೈಲ್ವೆ ಹೆಚ್ಚಿನ ಗಮನ ನೀಡಬೇಕಿದೆ ಎನ್ನುತ್ತಿದೆ ಸಿಎಜಿ ವರದಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


