ಅತ್ಯಾಚಾರ ಪ್ರಕರಣಗಳ ಬಗ್ಗೆ ಪ್ರಧಾನಿ ಮೋದಿ ಮೌನ - ರಾಹುಲ್ ಪ್ರಶ್ನೆ
ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ ಹಾಗೂ ಬಿಹಾರ ರಾಜ್ಯಗಳಲ್ಲಿನ ಅತ್ಯಾಚಾರ ಆರೋಪದ ಬಗ್ಗೆ ಪ್ರಧಾನಿ ನರೇಂದ್ರಮೋದಿ ಏಕೆ ಏನನ್ನು ಮಾತನಾಡದೆ ಮೌನವಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ರಾಯ್ ಪುರ : ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ ಹಾಗೂ ಬಿಹಾರ ರಾಜ್ಯಗಳಲ್ಲಿನ ಅತ್ಯಾಚಾರ ಆರೋಪದ ಬಗ್ಗೆ ಪ್ರಧಾನಿ ನರೇಂದ್ರಮೋದಿ ಏಕೆ ಏನನ್ನು ಮಾತನಾಡದೆ ಮೌನವಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹೊಸ ಕಚೇರಿ ಉದ್ಘಾಟಿಸಿದ ನಂತರ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತರ ಪ್ರದೇಶ ಹಾಗೂ ಬಿಹಾರದಲ್ಲಿನ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ವಿಷಯಕ್ಕೆ ಸಂಬಂಧಿಸಿದಂತೆ ನರೇಂದ್ರಮೋದಿ ಒಂದು ಪದವನ್ನು ಆಡುತ್ತಿಲ್ಲ, ಈ ವಿಷಯಗಳ ಬಗ್ಗೆ ಪ್ರಧಾನಿ ಮೌನದ ಬಗ್ಗೆ ದೇಶದ ಮಹಿಳೆಯರೂ ಕೂಡಾ ಆಶ್ಚರ್ಯಪಡುತ್ತಿದ್ದಾರೆ ಎಂದರು.
ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ. ರಾಪೆಲ್ ವಿಮಾನ ಖರೀದಿ ಒಪ್ಪಂದ ದೇಶದಲ್ಲಿ ದೊಡ್ಡ ಹಗರಣವಾಗಿದ್ದು, ನರೇಂದ್ರಮೋದಿ ಕೂಡಾ ಇದರಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.
ಈ ವಿಷಯವನ್ನು ಜನರಿಗೆ ಗೊತ್ತಾಗದಂತೆ ಏಕೆ ಬಚ್ಚಿಡಲಾಗುತ್ತಿದೆ ಎಂದು ಸಂಸತ್ತಿನಲ್ಲಿ ರಕ್ಷಣಾ ಸಚಿವರನ್ನು ಕೇಳಿದೆ. ಆದರೆ. ನನ್ನ ಪ್ರಶ್ನೆಗೆ ಉತ್ತರ ನೀಡಲಿಲ್ಲ. ಪ್ರಧಾನಿ ಕೇಳಿದ್ದಾಗ ಅವರು ಕೂಡಾ ನನ್ನ ಕಣ್ಣುಗಳನ್ನು ನೋಡಲಿಲ್ಲ, ಅವರು ಅಲ್ಲಿ ಇಲ್ಲಿ ನೋಡುತ್ತಿದ್ದರು. ಯಾಕೆಂದರೆ ಕಾವಲುದಾರ ಕೂಡಾ ಅದರಲ್ಲಿ ಭಾಗಿಯಾಗಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


