ರಾಜೀವ್ ಗಾಂಧಿ ಹತ್ಯೆ ಅಪರಾಧಿಗಳನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ: ಸುಪ್ರೀಂಗೆ ಕೇಂದ್ರ ಸರ್ಕಾರ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ 7 ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ...

Published On :
ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ 7 ಅಪರಾಧಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.
ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ 7 ಅಪರಾಧಿಗಳ ಬಿಡುಗಡೆಗೆ ವಿರೋಧ ವ್ಯಕ್ತ ಪಡಿಸಿತ್ತು ಎಂದು ಸುಪ್ರೀಂಕೋರ್ಟ್ ತಿಳಿಸಿದೆ, ತಮಿಳುನಾಡು ಜೈಲಿನಲ್ಲಿ 7 ಅಪರಾಧಿಗಳು 27 ವರ್ಷದಿಂದ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ಇವರನ್ನು ಬಿಡುಗಡೆ ಮಾಡಬೇಕೆಂದು ತಮಿಳುನಾಡು ಸರ್ಕಾರ ಮನವಿ ಮಾಡಿತ್ತು.
ಅಪರಾಧಿಗಳನ್ನು ಬಿಡುಗಡೆ ಮಾಡುವ ಸಂಬಂಧ ನಿರ್ಧಾರ ಕೈಗೊಳ್ಳುವಂತೆ ಕೇಳುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿತ್ತು, ಆದರೆ ರಾಜೀವ್ ಹಂತಕರನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ತಿಳಿಸಿದೆ. ಕೇಂದ್ರ ಸರ್ಕಾರದ ಅನುಮತಿಯಿಲ್ಲದೇ ಅಪರಾಧಿಗಳನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೋರ್ಟ್ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂಕೋರ್ಟ್ಕೇಂದ್ರಸರ್ಕಾರCenterRajiv Gandhi Killersರಾಜೀವ್ ಗಾಂಧಿ ಹಂತಕರುCannot be releasedಬಿಡುಗಡೆ ಸಾಧ್ಯವಿಲ್ಲ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


