ಸಿನಿಮಾ ಪ್ರೇಕ್ಷಕರು ಹೊರಗಿನ ಆಹಾರ ಕೊಂಡೊಯ್ಯಲು ಅನುವು: ಜಮ್ಮು-ಕಾಶ್ಮೀರ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ
ಸಿನಿಮಾ ಪ್ರೇಕ್ಷಕರು ಥಿಯೇಟರ್ ಒಳಗೆ ಹೊರಗಿನ ಆಹಾರವನ್ನು ಕೊಂಡೊಯ್ಯಲು ಅನುಮತಿ ನೀಡಿದ್ದ ಜಮ್ಮು-ಕಾಶ್ಮೀರ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ನವದೆಹಲಿ: ಸಿನಿಮಾ ಪ್ರೇಕ್ಷಕರು ಥಿಯೇಟರ್ ಒಳಗೆ ಹೊರಗಿನ ಆಹಾರವನ್ನು ಕೊಂಡೊಯ್ಯಲು ಅನುಮತಿ ನೀಡಿದ್ದ ಜಮ್ಮು-ಕಾಶ್ಮೀರ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಜುಲೈ ತಿಂಗಳಲ್ಲಿ ಜಮ್ಮು- ಕಾಶ್ಮೀರ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಭಾರತೀಯ ಮಲ್ಟಿಪ್ಲೆಕ್ ಅಸೋಸಿಯೇಷನ್ ಪರ ವಕೀಲರು ದಾಖಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ಈ ತೀರ್ಪು ನೀಡಿದೆ.
ಥಿಯೇಟರ್ ಒಳಗೆ ಆಹಾರ ವಸ್ತುಗಳನ್ನು ಕೊಂಡೊಯ್ಯಲು ಅವಕಾಶ ಮಾಡಿಕೊಟ್ಟರೆ ಭದ್ರತೆಯ ಸಮಸ್ಯೆ ಎದುರಾಗುತ್ತದೆ ಎಂದು ವಕೀಲರು ವಾದ ಮಂಡಿಸಿದರು.
ಸಿನಿಮಾ ಪ್ರೇಕ್ಷಕರು ಥಿಯೇಟರ್ ಒಳಗೆ ಆಹಾರ ವಸ್ತುಗಳನ್ನು ಕೊಂಡೊಯ್ಯಲು ಅವಕಾಶ ನೀಡುವಂತೆ ಜಮ್ಮು-ಕಾಶ್ಮೀರ ಹೈಕೋರ್ಟ್ ಜುಲೈ ತಿಂಗಳಲ್ಲಿ ರಾಜ್ಯದ ಎಲ್ಲಾ ಥಿಯೇಟರ್ ಮಾಲೀಕರಿಗೆ ಸೂಚನೆ ನೀಡಿತ್ತು.
ಇದೇ ರೀತಿಯಲ್ಲಿ ಮಹಾರಾಷ್ಟ್ರ ಸರ್ಕಾರ ಕೂಡಾ ಆಗಸ್ಟ್ 1 ರಿಂದ ಸಿನಿಮಾ ಪ್ರೇಕ್ಷಕರು ಹೊರಗಿನ ಆಹಾರ ಪದಾರ್ಥಗಳನ್ನು ಥಿಯೇಟರ್ ಒಳಗೆ ಕೊಂಡೊಯ್ಯಬಹುದು ಎಂದು ಘೋಷಣೆ ನೀಡಿತ್ತು.
ಆದಾಗ್ಯೂ, ಮಲ್ಟಿಪ್ಲೆಕ್ಸ್ ಸಿನಿಮಾ ಮಾಲೀಕರ ಪ್ರತಿಭಟನೆಯಿಂದಾಗಿ ಆಗಸ್ಟ್ 8 ರಂದು ಬಾಂಬೆ ಹೈಕೋರ್ಟ್ ನಲ್ಲಿ ನಡೆದ ವಿಚಾರಣೆ ಸಂದರ್ಭದಲ್ಲಿ ಭದ್ರತೆ ಹಿನ್ನೆಲೆಯಲ್ಲಿ ತಮ್ಮ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


