ಅಸ್ಸಾಂ: ರೈಲ್ವೆ ಖಾತೆ ರಾಜ್ಯ ಸಚಿವ ರಾಜೇನ್ ಗೋಹೈನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ರೈಲ್ವೆ ಇಲಾಖೆ ರಾಜ್ಯ ಸಚಿವ ರಾಜೇನ್ ಗೋಹೈನ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಅಸ್ಸಾಂ ನ ಓರ್ವ ಮಹಿಳೆ ಸಚಿವರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದಾಳೆ.

Published On :
ಗೌಹಾಟಿ: ರೈಲ್ವೆ ಇಲಾಖೆ ರಾಜ್ಯ ಸಚಿವ ರಾಜೇನ್ ಗೋಹೈನ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ಅಸ್ಸಾಂ ನ ಓರ್ವ ಮಹಿಳೆ ಸಚಿವರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದಾರೆ.
ಕೇಂದ್ರ ಅಸ್ಸಾಂನ ನಾಗಾನ್ ಜಿಲ್ಲೆಯ ಮಹಿಳೆ ಸಚಿವರಿಂದ ಅತ್ಯಾಚಾರಕ್ಕೊಳಗಾಗಿದ್ದಾಗಿ ಆರೋಪಿಸಿ ನಾಗಾನ್ ಸಾದರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಆಗಸ್ಟ್ 2ರಂದು ಪ್ರಕರಣ ದಾಖಲಿಸಲಾಗಿದೆ ಎಂದು ನಾಗಾನ್ ಪೊಲೀಸ್ ಅಧೀಕ್ಷಕ ಶಂಕರ್ ರಾಯ್ ಮೇಧಿ ಎಕ್ಸ್ ಪ್ರೆಸ್ ಗೆ ಹೇಳಿದ್ದಾರೆ. ಐಪಿಸಿ ಸೆಕ್ಷನ್ 417, 376 ಮತ್ತು 506 ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಾಲ್ಕು ಬಾರಿ ನಾಗಾನ್ ಸಂಸದರಾಗಿರುವ ಗೋಹೈನ್ ಈ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಲು ಲಭ್ಯವಿಲ್ಲ. ಆದರೆ ಸಂಸದರು ಮಹಿಳೆಯ ಪತಿಯನ್ನು ನಿಂದಿಸುತ್ತಿರುವ ಆಡಿಯೋ ಟೇಪ್ ಇದೀಗ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Assamಅಸ್ಸಾಂಅತ್ಯಾಚಾರ ಆರೋಪRajen Gohainrape chargeರಾಜೇನ್ ಗೋಹೈನ್Minister of State for Railwaysರೈಲ್ವೆ ಖಾತೆ ರಾಜ್ಯ ಸಚಿವ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


