ಹಂದಿ, ದನದ ಮಾಂಸ ತಿನ್ನುತ್ತಿದ್ದ ಜವಹರ್ ಲಾಲ್ ನೆಹರು ಪಂಡಿತ್ ಆಗಲು ಹೇಗೆ ಸಾಧ್ಯ: ಬಿಜೆಪಿ ಶಾಸಕ
ಗೋಮಾಂಸ ಮತ್ತು ಹಂದಿಮಾಂಸವನ್ನು ತಿನ್ನುತ್ತಿದ್ದ ದೇಶದ ಪ್ರಥಮ ಪ್ರಧಾನಿ ಜವಹಾರ್ ಲಾಲ್ ನೆಹರು ಅವರು ಪಂಡಿತರಾಗಲು ಹೇಗೆ ಸಾಧ್ಯ ಎಂದು ಬಿಜೆಪಿ ...

Published On :
ನವದೆಹಲಿ: 'ಗೋಮಾಂಸ ಮತ್ತು ಹಂದಿಮಾಂಸವನ್ನು ತಿನ್ನುತ್ತಿದ್ದ ದೇಶದ ಪ್ರಥಮ ಪ್ರಧಾನಿ ಜವಹಾರ್ ಲಾಲ್ ನೆಹರು ಅವರು ಪಂಡಿತರಾಗಲು ಹೇಗೆ ಸಾಧ್ಯ ಎಂದು ಬಿಜೆಪಿ ಶಾಸಕ ಜ್ಞಾನ್ ದೇವ್ ಅಹುಜಾ ಪ್ರಶ್ನಿಸಿದ್ದಾರೆ.
'ನೆಹರು ಪಂಡಿರಲ್ಲವೇ ಅಲ್ಲ. ಆ ಪೂರ್ವ ಪ್ರತ್ಯಯವನ್ನು ಕಾಂಗ್ರೆಸ್ ಪಕ್ಷ ಅವರ ಹೆಸರಿನಲ್ಲಿ ಸೇರಿಸಿದ್ದು ಎಂದು ರಾಜಸ್ಥಾನದ ಅಲ್ವಾರ್ ಕ್ಷೇತ್ರದ ಬಿಜೆಪಿ ಶಾಸಕ ಜ್ಞಾನ್ ದೇವ್ ಹೇಳಿದ್ದಾರೆ.
'ರಾಹುಲ್ ಗಾಂಧಿ ಎಂದಿಗೂ ಅಜ್ಜಿ ಇಂದಿರಾ ಗಾಂಧಿ ಅವರೊಂದಿಗೆ ದೇಗುಲಗಳಿಗೆ ಭೇಟಿ ನೀಡಿಲ್ಲ. ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿಕೆ ಸುಳ್ಳು . ಅದನ್ನು ನಿಜ ಮಾಡಿದಲ್ಲಿ ನಾನು ರಾಜಕೀಯ ಸನ್ಯಾಸ ಪಡೆಯುತ್ತೇನೆ ,ನಿಜವಾಗಿದ್ದಲ್ಲಿ ಸಚಿನ್ ಪೈಲಟ್ ರಾಜಕೀಯ ಕ್ಷೇತ್ರ ಬಿಡಬೇಕು' ಎಂದು ಸವಾಲು ಹಾಕಿದ್ದಾರೆ.
ನೆಹರು ಹಾಗೂ ಇಂದಿರಾಗಾಂಧಿ ಕುಟುಂಬದ ಬಗ್ಗೆ ಸದಾ ವಾಗ್ದಾಳಿ ನಡೆಸುವ ಅಹುಜಾ , ಗೋಹತ್ಯೆ ಭಯೋತ್ಪಾದನೆಗಿಂತ ದೊಡ್ಡ ಅಪರಾಧ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


