ಅಂಬೇಡ್ಕರ್ ಪ್ರತಿಮೆಗೆ ಬಿಜೆಪಿ ಮುಖಂಡರಿಂದ ಮಾಲಾರ್ಪಣೆ: ದಲಿತ ವಕೀಲರಿಂದ ಗಂಗಾಜಲದಲ್ಲಿ ಶುದ್ದೀಕರಣ!
ಬಿಜೆಪಿ ರಾಜ್ಯ ಕಾರ್ಯದರ್ಶಿ ಸುನೀಲ್ ಬನ್ಸಾಲ್ ಶುಕ್ರವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದರು, ಆದರೆ ಇದೇ ವೇಳೆ ...

Published On :
ಮೀರತ್: ಬಿಜೆಪಿ ರಾಜ್ಯ ಕಾರ್ಯದರ್ಶಿ ಸುನೀಲ್ ಬನ್ಸಾಲ್ ಶುಕ್ರವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದರು, ಆದರೆ ಇದೇ ವೇಳೆ ಪ್ರತಿಮೆಯನ್ನು ಕೆಲ ದಲಿತ ವಕೀಲರು ಹಾಲು ಮತ್ತು ಗಂಗಾಜಲದಿಂದ ಶುದ್ದೀಕರಿಸಿರುವ ಘಟನೆ ಮೀರತ್ ನಲ್ಲಿ ನಡೆದಿದೆ.
ಜಿಲ್ಲಾ ನ್ಯಾಯಾಲಯದ ಮುಂದೆ ಇರುವ ಅಂಬೇಡ್ಕರ್ ಪ್ರತಿಮೆಗೆ ಸುನೀಲ್ ಬನ್ಸಾಲಿ ಮಾಲಾರ್ಪಣೆ ಮಾಡಿದ್ದರು, ಇದರಿಂದ ಪ್ರತಿಮೆ ಕೊಳಕಾಗಿತ್ತು , ಅದಕ್ಕಾಗಿ ಹಾಲು ಮತ್ತು ಗಂಗಾಜಲದಿಂದ ಶುದ್ದಿಕರೀಸಿವೆ ಎಂದು ಹೇಳಿದ್ದಾರೆ..
ಬಿಜೆಪಿ ಸರ್ಕಾರ ದಲಿತರನ್ನು ತುಳಿಯುತ್ತಿದೆ, ಅಂಬೇಡ್ಕರ್ ಗಾಗಿ ಅವರು ಏನೂ ಮಾಡಲಿಲ್ಲ,ತಮ್ಮ ಪಕ್ಷದ ಪರವಾಗಿ ಪ್ರಚಾರ ಪಡೆದುಕೊಳ್ಳಲು ಮಾತ್ರ ಅಂಬೇಡ್ಕರ್ ಹೆಸರನ್ನು ಬಳಸಿಕೊಳ್ಳುತ್ತಿದೆ, ಎಂದು ವಕೀಲರೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


