ಬಿಹಾರ: ವಸತಿ ನಿಲಯದಲ್ಲಿ ಶೋಷಣೆ ಪ್ರಕರಣ : ಕಿಂಗ್ ಪಿನ್ ನಿಂದ 40 ಪೋನ್ ನಂಬರ್ಸ್ ವಶ
ಮುಜಫ್ಪರ್ ಪುರ್ ವಿನ ಸೆಂಟ್ರಲ್ ಜೈಲಿನಲ್ಲಿರುವ ಪ್ರಮುಖ ಆರೋಪಿ ಬ್ರಜೇಶ್ ಠಾಕೂರ್ ನಿಂದ 40ಪೋನ್ ನಂಬರ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಾಟ್ನಾ : ದೇಶಾದ್ಯಂತ ತೀವ್ರ ಟೀಕೆಗೆ ಗುರಿಯಾಗಿರುವ ಬಿಹಾರ ವಸತಿ ನಿಲಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ಶೋಷಣೆ ಪ್ರಕರಣದಲ್ಲಿ ಮುಜಫ್ಪರ್ ಪುರ್ ವಿನ ಸೆಂಟ್ರಲ್ ಜೈಲಿನಲ್ಲಿರುವ ಪ್ರಮುಖ ಆರೋಪಿ ಬ್ರಜೇಶ್ ಠಾಕೂರ್ ನಿಂದ 40ಪೋನ್ ನಂಬರ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜೈಲಿನ ಸಂದರ್ಶಕರ ಪ್ರದೇಶದಲ್ಲಿ ಠಾಕೂರ್ ಇದ್ದ ಸ್ಥಳದಲ್ಲಿದ್ದ ಅಧಿಕಾರಿಗಳು ಎರಡು ಪುಟಗಳಷ್ಟು ಕೈ ಬರಹದಲ್ಲಿದ್ದ 40 ಪೋನ್ ನಂಬರ್ ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಶೋಧ ಕಾರ್ಯಾಚರಣೆ ವೇಳೆಯಲ್ಲಿ ಸಚಿವರು ಸೇರಿದಂತೆ ಕೆಲ ಪ್ರಭಾವಶಾಲಿ ವ್ಯಕ್ತಿಗಳ ಹೆಸರುಗಳು ಕಂಡುಬಂದಿತ್ತು ಎಂದು ಜಿಲ್ಲಾಡಳಿತದ ಅಧಿಕಾರಿಗಳು ಹೇಳಿದ್ದಾರೆ.
ಬಿಹಾರ ಪೊಲೀಸರು ಕಳೆದ ರಾತ್ರಿ ಡಜನ್ ಗೂ ಹೆಚ್ಚು ಜೈಲುಗಳ ಮೇಲೆ ದಾಳಿ ನಡೆಸಿದ್ದು, ಕಾರಾಗೃಹದಲ್ಲಿನ ಆಕ್ಷೇಪಾರ್ಹ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜೂನ್ 2 ರಂದು ಬಂಧನಕ್ಕೊಳಗಾಗಿರುವ ಬ್ರಿಜೇಶ್ ಠಾಕೂರ್ ಐದು ದಿನಗಳನ್ನು ಮುಜಾಫ್ಪರ್ ಪುರ್ ವಿನ ಸೆಂಟ್ರಲ್ ಜೈಲಿನಲ್ಲಿ ಕಳೆದಿದ್ದಾನೆ.
ಆರೋಗ್ಯದ ಆಧಾರದ ಮೇಲೆ ಆತನನ್ನು ಕಾರಾಗೃಹ ವಾರ್ಡ್ ನಲ್ಲಿ ಇರಿಸಿಲ್ಲ , ವೈದ್ಯಕೀಯ ವಾರ್ಡ್ ನಲ್ಲಿ ಆತ ಇದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು, ಪಾಟ್ನಾ ಹೈಕೋರ್ಟ್ ಮೇಲ್ವಿಚಾರಣೆ ಮಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


